For the best experience, open
https://m.suddione.com
on your mobile browser.
Advertisement

ರಾಜ್ಯ ಬಜೆಟ್ | ಚಿತ್ರದುರ್ಗಕ್ಕೆ ಸಿಕ್ಕಿದ್ದೇನು ? ಸಂಪೂರ್ಣ ವಿವರ ಇಲ್ಲಿದೆ...!

04:34 PM Feb 16, 2024 IST | suddionenews
ರಾಜ್ಯ ಬಜೆಟ್   ಚಿತ್ರದುರ್ಗಕ್ಕೆ ಸಿಕ್ಕಿದ್ದೇನು   ಸಂಪೂರ್ಣ ವಿವರ ಇಲ್ಲಿದೆ
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16 : ಸಿಎಂ ಸಿದ್ದರಾಮಯ್ಯ ತಮ್ಮ 15 ನೇ ಬಜೆಟನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಚಿತ್ರದುರ್ಗ ಜಿಲ್ಲೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಅನುದಾನವನ್ನು ಮೀಸಲಿಟ್ಟಿದ್ದಾರೆ ಎಂಬುದನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

1.ಮೀನುಗಾರಿಕೆ : ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳ ಗಣಿಭಾದಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು ರೂ.6 ಕೋಟಿ ವೆಚ್ಚ ಮಾಡಲಾಗುವುದು.

Advertisement

2. ಜಲಸಂಪನ್ಮೂಲ: ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಲಾಗಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿರುವುದಿಲ್ಲ. ಹಾಗೆಯೇ ಹಿಂದಿನ ರಾಜ್ಯ ಸರ್ಕಾರ ತನ್ನ ಆಯವ್ಯಯ ಘೋಷಣೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾನ್ಯತೆ ನೀಡಲಾಗುತ್ತಿರುವುದರಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಅಭಿನಂದನೆ ತಿಳಿಸಲಾಗಿತ್ತು.  ಆದರೆ ಈವರೆಗೆ ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರ ಘೋಷಿಸದೆ ಇರುವುದರಿಂದ ಇದು ಹುಸಿಯಾದ ಘೋಷಣೆಯಾಗಿದೆ.

ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯಡಿ ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮಥ್ರ್ಯ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

3.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ : ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಹಾಗೂ ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು ರೂ.20 ಕೋಟಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.

4. ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL)  ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡುಗು ಜಿಲ್ಲೆಗಳಲ್ಲಿ ಮತ್ತು 2025-26ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮೇನಹಳ್ಳಿಯಲ್ಲಿ ತಾಲ್ಲೂಕುಮಟ್ಟದ ಸಾರ್ವಜನಿಕ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ ರೂ.11 ಕೋಟಿ ಅನುದಾನ ನೀಡಲಾಗುವುದು.

5. ವೈದ್ಯಕೀಯ ಶಿಕ್ಷಣ :  ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ರೂ.500 ಕೋಟಿ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ. ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು.

6. ಕೌಶಲ್ಯಾಭಿವೃದ್ಧಿ : ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ ಒಟ್ಟು ರೂ.150 ವೆಚ್ಚದಲ್ಲಿ ಹೊಸ ಜಿಟಿಟಿಸಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Tags :
Advertisement