Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರೈತ ವಿರೋಧಿ ಸರ್ಕಾರ ರಾಜ್ಯಕ್ಕೆ ಅಗತ್ಯವಿಲ್ಲ : ಮಾಜಿ ಶಾಸಕ ಎ.ಎಸ್. ಪಾಟೀಲ್

04:18 PM Mar 11, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 11 :  ಈ ಹಿಂದೆ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಹಿತವನ್ನು ಕಾಯುವಂತಹ ಕೆಲಸ ಮಾಡಿತ್ತು. ಆದರೆ ಈಗ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಂತಹ ಹಲವಾರು ಯೋಜನೆಗಳನ್ನು ರದ್ದು ಮಾಡುವುದರ ಮೂಲಕ ರೈತ ವಿರೋಧಿ ಸರ್ಕಾರವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು, ಮಾಜಿ ಶಾಸಕರಾದ ಎ.ಎಸ್. ಪಾಟೀಲ್ ನಡಹಳ್ಳಿ ಸರ್ಕಾರದ ಕ್ರಮವನ್ನು ಖಂಡಿಸಿದರು.

Advertisement

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಯಡಿಯೂರಪ್ಪ ಸರಕಾರವಿದ್ದಾಗ  ರೈತರಿಗೆ ಪರಿಹಾರವನ್ನು ನೀಡುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡುವುದು ಇರಲಿ. ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ರಾಜ್ಯದಲ್ಲಿ ಎಂದೂ ಕಾಣದಂತಹ ಬರಗಾಲ ಬಂದಿದೆ. ರಾಜ್ಯದಲ್ಲಿ ಎಲ್ಲೂ ಸಹ ಬರಗಾಲದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಚುನಾಯಿತ ಪ್ರತಿನಿಧಿಗಳಾಗಲಿ, ಉಸ್ತುವಾರಿ ಸಚಿವರುಗಳಾಗಲಿ, ಎಲ್ಲೂ  ಸಹ ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ.ರೈತರ ಕಷ್ಟ ಸುಖಗಳನ್ನು ಆಲಿಸಿಲ್ಲ. ಇಂತಹ ಸರ್ಕಾರ ರಾಜ್ಯಕ್ಕೆ ಅಗತ್ಯವಿಲ್ಲ ಎಂದು ಜನ ಹೇಳುತ್ತಿದ್ದಾರೆ ಎಂದರು.

ಯಾವುದೇ ಕಾರಣದಿಂದಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿ ನಿಲ್ಲುತ್ತಿಲ್ಲ. ಈಗಲೂ ಸಹ ರಾಜ್ಯ ಸರ್ಕಾರ  ರೈತರ ಪರವಾಗಿ ನಿಲ್ಲದಿದ್ದರೆ ರಾಜ್ಯ ಬಿಜೆಪಿ ರೈತ ಮೋರ್ಚಾದ ವತಿಯಿಂದ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು. ನಾವು ಹಲವಾರು ಕಡೆಗಳಲ್ಲಿ ಪ್ರವಾಸ ಮಾಡಿ ರೈತರ ಸಮಸ್ಯೆಗಳನ್ನು ಆಲಿಸಿದ್ದೇವೆ... ಅವರು ಸಹ ನಮಗೆ ಯಾವುದೇ ರೀತಿಯ ಗ್ಯಾರಂಟಿಗಳು ಬೇಡ. ನೀರು ಮತ್ತು ಸರಿಯಾದ ಪ್ರಮಾಣದಲ್ಲಿ ವಿದ್ಯುತ್ತನ್ನು ನೀಡಲಿ ಎಂದು ಒತ್ತಾಯಿಸುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ನೀಡಬೇಕಾಗಿದೆ...

ಚಿತ್ರದುರ್ಗ ಜಿಲ್ಲೆಯಲ್ಲಿ ಬರಗಾಲದ ತೀವ್ರತೆ ಹೆಚ್ಚಾಗಿದ್ದು... ಇಲ್ಲೂ ಸಹ ಯಾವುದೇ ತರವಾದಂತಹ  ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಿಲ್ಲ... ಇದರ ಬಗ್ಗೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಸಹ ಗಮನ ನೀಡಿಲ್ಲ.. ಜಿಲ್ಲಾ ಉಸ್ತುವಾರಿ ಸಚಿವರು ಸಹ ಯಾವುದೇ ಜಮೀನುಗಳಿಗೆ ಭೇಟಿ ನೀಡಿಲ್ಲ. ಕೇಂದ್ರ ಸರ್ಕಾರ ಅಪ್ಪರ್ ಭದ್ರಾ ಮೇಲ್ದಂಡೆ  ಯೋಜನೆಗೆ 5300 ಕೋಟಿ ರೂ ನೀಡುತ್ತೇನೆ ಎಂದು ಹೇಳಿತ್ತು... ಅದರಂತೆ ಹಣ ನೀಡಲು ತಯಾರಿದೆ ಆದರೆ ಅದಕ್ಕೆ ತಕ್ಕಂತೆ ನಿಯಮಗಳನ್ನು ರಾಜ್ಯ ಸರ್ಕಾರ ಪಾಲನೆ ಮಾಡಬೇಕಿದೆ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗಳನ್ನು ನಿರ್ಮಾಣ ಮಾಡಿದ ಮೇಲೆ ಕೃಷಿ ಸಿಂಚನ ಯೋಜನೆಯಡಿ ರೈತರ ಹೊಲಗಳಿಗೆ ಹನಿ ನೀರಾವರಿ ಯೋಜನೆಯಡಿ ನೀರನ್ನು ನೀಡುವ ಯೋಜನೆ ಇದಾಗಿದೆ.ಇದರ ಬಗ್ಗೆ ರಾಜ್ಯ ಸರ್ಕಾರ ಗಮನ ನೀಡಬೇಕಾಗಿದೆ. ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು ಎಂದ ಅವರು, ರಾಜ್ಯ ಸರ್ಕಾರ ಬರಗಾಲಕ್ಕೆ ಅಗತ್ಯವಾಗಿ ಬೇಕಾದ ಕಾರ್ಯಕ್ರಮಗಳನ್ನು ಸರ್ಕಾರ ಬಂದು 9 ತಿಂಗಳಾದರೂ ಸಹಾ ರೂಪಿಸಿಲ್ಲ, ಇದರ ಬದಲು ಗ್ಯಾರಂಟಿಗಳಿಎಗ ಹಣವನ್ನು ಹೊಂದಿಸುರವ ಕಾರ್ಯದಲ್ಲಿ ಸರ್ಕಾರ ಮಗ್ನವಾಗಿದೆ, ಇನ್ನು ಜನತೆಯ ಸಮಸ್ಯೆಯನ್ನು ಆಲಿಸಲು ಸಮಯವಿಲ್ಲ ಎಂದು ದೂರಿದರು.

ಬೆಂಗಳೂರಿಂದ ಹೊರಟು ತುಮಕೂರು ಶಿರಾ ಮಾರ್ಗವಾಗಿ ಹಿರಿಯೂರು ತಾಲೂಕು ಜವಗೊಂಡನಹಳ್ಳಿಯಲ್ಲಿ ಗೊಪೂಜೆ  ಟ್ರ್ಯಾಕ್ಟರ್ ಪೂಜೆ ಮತ್ತು ಕೃಷಿ ಪರಿಕರಗಳ ಪೂಜೆ ಸಲ್ಲಿಸಿ ಆ ಭಾಗದ  ರೈತರೊಂದಿಗೆ ಸಂವಾದ ಮಾಡಿ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದು ಅಲ್ಲಿಂದ ಆ ಭಾಗದ ಹಳ್ಳಿಯಲ್ಲಿ ರೈತರೊಂದಿಗೆ ಗ್ರಾಮಪರಿಕ್ರಮ ಯಾತ್ರೆ ನಂತರ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ರೈತರೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪದ ಯೋಜನೆಗಳ ಬಗ್ಗೆ ಸಂವಾದ ನಡೆಸಿದರು.

ಗೋಷ್ಠಿಯಲ್ಲಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್,ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಕೆ ಮಲ್ಲಿಕಾರ್ಜುನ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಬುರುಡೆ ಕಟ್ಟೆ ರಾಜೇಶ್,ಚಿತ್ರದುರ್ಗ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್ ಟಿ ಜಿಲ್ಲಾ ಬಿಜೆಪಿ ವಕ್ತಾರರಾದ ಬೇದ್ರೇ ನಾಗರಾಜು ದಗ್ಗೆ ಶಿವಪ್ರಕಾಶ್, ಚಾಲುಕ್ಯ ನವೀನ್, ಶಾರದಮ್ಮ, ಶ್ಯಾಮಲ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement
Tags :
anti-farmer governmentbengaluruchitradurgaFormer MLA A.S. Patilsuddionesuddione newsಅಗತ್ಯಚಿತ್ರದುರ್ಗಬೆಂಗಳೂರುಮಾಜಿ ಶಾಸಕ ಎ.ಎಸ್. ಪಾಟೀಲ್ಮಾಜಿ ಶಾಸಕ ತಿಪ್ಪಾರೆಡ್ಡಿರಾಜ್ಯರೈತ ವಿರೋಧಿ ಸರ್ಕಾರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article