Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಆರ್. ಸತ್ಯಣ್ಣನವರಿಗೆ  ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ

07:08 PM Jul 16, 2024 IST | suddionenews
Advertisement

ಸುದ್ದಿಒನ್,ಚಿತ್ರದುರ್ಗ, ಜುಲೈ .16 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿತ್ರದುರ್ಗದ ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಇವರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Advertisement

ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷರಾಗಿ ಹತ್ತಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಆರ್.ಸತ್ಯಣ್ಣ ಕೋಟೆಗೆ ಬರುವ ಪ್ರವಾಸಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯಕ್ಕಾಗಿ ಅನೇಕ ಬಾರಿ ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಿ ರಾಜ್ಯ ಹಾಗೂ ಕೇಂದ್ರ ಮಂತ್ರಿಗಳ ಮೇಲೆ ಒತ್ತಡ ಹೇರಿದ್ದರು.

 

Advertisement

ಕೋಟೆಯೊಳಗಿರುವ ನವಿಲುಗಳಿಗೆ ದಿನವೂ ಆಹಾರ ಧಾನ್ಯಗಳನ್ನು ಪೂರೈಸಿಕೊಂಡು ಬರುತ್ತಿರುವುದಲ್ಲದೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕಾಯಕ ಯೋಗಿ ಪ್ರಶಸ್ತಿ ನೀಡಿ ಸನ್ಮಾನಿಸಿತು.

ರಾಜ್ಯದ 34 ಜಿಲ್ಲೆಗಳಿಂದಲೂ ಒಬ್ಬೊಬ್ಬ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿದೆ. ಅನುಭವ ಮಂಟಪ ಬಸವ ಕಲ್ಯಾಣದ ನಾಡೋಜ ಡಾ.ಬಸವಲಿಂಗ ಪಟ್ಟ ದೇವರು, ಬೆಲ್ದಾಳದ ಸಿದ್ದರಾಮ ಶರಣರು ಸಾನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಾಗರಾಜ್ ಸಂಗಮ್, ಬೇರೆ ಬೇರೆ ಜಿಲ್ಲೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರುಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದರು.

Advertisement
Tags :
bengaluruchitradurgaKayaka Ratna awardr SatyannaState-levelsuddionesuddione newsಆರ್. ಸತ್ಯಣ್ಣಕಾಯಕ ರತ್ನ ಪ್ರಶಸ್ತಿಚಿತ್ರದುರ್ಗಬೆಂಗಳೂರುರಾಜ್ಯ ಮಟ್ಟಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article