For the best experience, open
https://m.suddione.com
on your mobile browser.
Advertisement

ನೀರು ನೈರ್ಮಲ್ಯ ಹಾಗೂ ಸ್ವಚ್ಚತೆ ಕುರಿತು ಬೀದಿ ನಾಟಕದ ಜಾಗೃತಿ ಕಾರ್ಯಕ್ರಮ : ಸ್ವಚ್ಛತೆಗೆ ಆದ್ಯತೆ ನೀಡಿ : ದಿನೇಶ್ ಪೂಜಾರಿ

02:29 PM Jun 19, 2024 IST | suddionenews
ನೀರು ನೈರ್ಮಲ್ಯ ಹಾಗೂ ಸ್ವಚ್ಚತೆ ಕುರಿತು ಬೀದಿ ನಾಟಕದ ಜಾಗೃತಿ ಕಾರ್ಯಕ್ರಮ   ಸ್ವಚ್ಛತೆಗೆ ಆದ್ಯತೆ ನೀಡಿ   ದಿನೇಶ್ ಪೂಜಾರಿ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 19 : ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.

Advertisement

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಚಿಕ್ಕಪ್ಪನಹಳ್ಳಿ ಕಾರ್ಯಕ್ಷೇತ್ರದ ನೇಸರ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ನೀರು ನೈರ್ಮಲ್ಯ ಸ್ವಚ್ಚತೆ ಬಗ್ಗೆ ಆಯೋಜಿಸಲಾಗಿದ್ದ ಬೀದಿ ನಾಟಕ ಉದ್ಘಾಟಿಸಿ ಮಾತನಾಡಿದರು.

ಹೇಮಾವತಿ ಅಮ್ಮನವರು ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳೆಯರಿಗೆ ನಾನಾ ರೀತಿಯ ಯೋಜನೆಗಳನ್ನು ನೀಡಿದ್ದಾರೆ. ಬಡವರಿಗೂ ಶುದ್ದವಾದ ಕುಡಿಯವ ನೀರು ಸಿಗಬೇಕು. ಕಲುಷಿತ ನೀರು ಸೇವಿಸಿದರೆ ನಾನಾ ರೀತಿಯ ತೊಂದರೆಗಳಿಗೆ ಒಳಗಾಗಬೇಕಾಗುತ್ತದೆ. ಅದೇ ರೀತಿ ಗ್ರಾಮದಲ್ಲಿ ನಿಮ್ಮ ನಿಮ್ಮ ಮನೆಗಳ ಮುಂದೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ರವಿಚಂದ್ರ, ಶಾಲೆಯ ಮುಖ್ಯ ಶಿಕ್ಷಕ ಕಾಂತಪ್ಪ, ಶಶಿ, ವೆಂಕಟೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ, ವಸಂತ, ಶ್ಯಾಮಲಮ್ಮ, ಗೀತ, ಮಂಜುಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags :
Advertisement