For the best experience, open
https://m.suddione.com
on your mobile browser.
Advertisement

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪಗೆ ಬೆಂಬಲ | ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ

06:34 PM Apr 16, 2024 IST | suddionenews
ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ ಬೆಂಬಲ   ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ: ಏ.16:  ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಬೆಂಬಲಿಸಲು ಜಿಲ್ಲಾ ಗುತ್ತಿಗೆದಾರರ ಸಂಘ ನಿರ್ಣಯ ಕೈಗೊಂಡಿದೆ.

Advertisement
Advertisement

ಜೋಗಿಮಟ್ಟಿ ರಸ್ತೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಆರ್.ಮಂಜುನಾಥ್ ನಿವಾಸದ ಆವರಣದಲ್ಲಿ ಮಂಗಳವಾರ  ಹಮ್ಮಿಕೊಂಡಿದ್ದ ಕಂಟ್ರಾಕ್ಟರಗಳ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾರ್ಥ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಸರಳ ಸಜ್ಜನ ರಾಜಕಾರಣಿ. 2014ರಲ್ಲಿ ಎಂಪಿ ಆಗಿದ್ದಾಗ ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗದೇ ಆಡಳಿತ ನಡೆಸಿದ್ದಾರೆ. ಸಂಸದರ ಅನುದಾನ ಹಂಚಿಕೆ ವೇಳೆ ಯಾರೊಬ್ಬರಿಂದಲೂ ಕಮಿಷನ್ ಪಡೆಯದೆ ಗುಣಮಟ್ಟ ಕಾಮಗಾರಿ ನಡೆಯಲು ಕಾರಣರಾಗಿದ್ದರು. ಹೀಗಾಗಿ ಗುತ್ತಿಗೆದಾರರ ಸಂಘದ ವತಿಯಿಂದ ಸರ್ವಾನುಮತದಿಂದ ಅವರನ್ನು ಬೆಂಬಲಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಪಿಡಬ್ಲೂಡಿ, ಜಲಸಂಪನ್ಮೂಲ ಮಂತ್ರಿಯಾಗಿದ್ದಾಗ ಗುತ್ತಿಗೆದಾರರ ಬಿಲ್ ಪಾವತಿಸಲು ಲಂಚಕ್ಕೆ ಒತ್ತಾಯಿಸಿದ್ದರ ಬಗ್ಗೆ ವ್ಯಾಪಕ ಆರೋಪ ಕೇಳಿ ಬಂದಿತ್ತು. ಇಂತಹ ರಾಜಕಾರಣಿ ಕಂಟ್ರಾಕ್ಟರಗಳು ಹಾಗೂ ಚಿತ್ರದುರ್ಗಕ್ಕೆ ಕಂಟಕ. ಈ ಕಾರಣಕ್ಕೆ ಸಂಸದರಾಗಿದ್ದ ಸಂದರ್ಭ ಭ್ರಷ್ಟರಹಿತ ಆಡಳಿತ ನಡೆಸಿದ ಚಂದ್ರಪ್ಪ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿ ಗುಣಮಟ್ಟದ ಕಾಮಗಾರಿ ಗುತ್ತಿಗೆದಾರರು ಕೈಗೊಳ್ಳಲು  ಕಮಿಷನ್ ಪಡೆಯದ ಚಂದ್ರಪ್ಪ ಅವರಂತಹ ಜನಪ್ರತಿಗಳು ಅಗತ್ಯವಿದೆ  ಜಿಲ್ಲೆಯಲ್ಲಿನ ಗುತ್ತಿಗೆದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಬೆಂಬಲಿಸುವ ಜೊತೆಗೆ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ನಾನು ಸಮಾಜ ಕಲ್ಯಾಣ ಮಂತ್ರಿಯಾಗಿದ್ದಾಗ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ, ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಮಂತ್ರಿಯಾದ ಸಂದರ್ಭದಲ್ಲಿಯೂ 5 ಲಕ್ಷ ರೂ. ಸಬ್ಸಿಡಿ  ಹಣವನ್ನು ರು.1 ಲಕ್ಷ ಸೀಮೀತಗೊಳಿಸಿ ಬಡವರ ಪಾಲಿಗೆ ಮಾರಕವಾದರು. ಎಸ್.ಸಿ.ಎಸ್.ಪಿ, ಟಿಎಸ್ಪಿ ಹಣವನ್ನು ಸಾಮಾನ್ಯ ಖಾತೆಗೆ ವರ್ಗಾಯಿಸಿ ಜನಸಾಮಾನ್ಯರ ಕಲ್ಯಾಣಕ್ಕೆ ಅಡ್ಡಿಪಡಿಸಿದರು ಎಂದು ಆರೋಪಿಸಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ದಿನನಿತ್ಯ ಬಳಕೆಯ ಡೀಸೆಲ್, ಪೆಟ್ರೋಲ್, ಗ್ಯಾಸ್, ಆಹಾರ ವಸ್ತುಗಳ ಬೆಲೆ ಏರಿಸುತ್ತಿದೆ. ಇದರಿಂದ ಬಡವರು ಬದುಕುವುದೇ ಕಷ್ಟವಾಗಿದೆ. ಕೇಂದ್ರ ಸರ್ಕಾರ ಕೊಟ್ಟ ಭರವಸೆಗಳಲ್ಲಿ ಇದುವರೆಗೂ ಒಂದನ್ನೂ ಈಡೇರಿಸಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದುರಾಡಳಿತಕ್ಕೆ ಬೇಸತ್ತು ಮತದಾರರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದರು. ಅದೇ ಫಲಿತಾಂಶ ಲೋಕಸಭಾ ಚುನಾವಣೆಯಲ್ಲಿಯೂ ಮರುಕಳಿಸಲಿದೆ ಕಾಂಗ್ರೆಸ್ ಪಕ್ಷವು ನಿರ್ಗತಿಕರ, ಬಡವರ, ಶೋಷಿತರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಪಕ್ಷವು ಅವುಗಳೆಲ್ಲವನ್ನು ಮೊಟಕುಗೊಳಿಸಿದೆ ಎಂದು ಆರೋಪಿಸಿದರು.

ಪ್ರಸ್ತುತ ದಿನಮಾನಗಳಲ್ಲಿ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದ್ದು, ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್  ಪಕ್ಷವನ್ನು ಬೆಂಬಲಿಸಬೇಕಿದೆ. ಬಿಜೆಪಿ ನಾಯಕರು ಬಾಯಿ ಬಿಟ್ಟರೇ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಭಾಷಣ ಮಾಡುತ್ತಾರೆ. ಸಂವಿಧಾನವು ಇಡೀ ದೇಶದ ಸರ್ವ ಜನಾಂಗದ ಶ್ರೇಯೋಭೀವೃದ್ಧಿಗಾಗಿ ರಚನೆಗೊಂಡಿದೆ. ಇದರಿಂದ ಸರ್ವರು ಸಮಾನವಾಗಿ ಬದುಕಲು ಅವಕಾಶ ಮಾಡಿಕೊಟ್ಟಿದೆ. ಇಂತಹ ಸಂವಿಧಾನವನ್ನು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬದಲಿಸುತ್ತೇವೆ ಎಂದು ಹೇಳುತ್ತಾರೆ. ಹೀಗಾಗಿ ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಬೇಕೆಂದರು.

ಬಿಜೆಪಿಯವರ ಸುಳ್ಳು ಭಾಷಣಗಳು, ನಾಟಕಗಳನ್ನು ಈಗ ಜನ ನಂಬುವುದಿಲ್ಲ. ನಾನು ಸಂಸತ್ ಸದಸ್ಯನಾದ ಸಂದರ್ಭದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದ ನೀಡದೇ ಆಡಳಿತ ನಡೆಸಿದೆ. ಹೀಗಾಗಿ ಕ್ಷೇತ್ರದ ಯಾವ ಭಾಗಕ್ಕೂ ನಾನು ಹೋದ್ರೆ ಮನೆ ಮಗನಂತೆ ನನ್ನನ್ನು ಕಾಣುತ್ತಿದ್ದಾರೆ. ಗೆಲುವು ನಿಶ್ಚಿತವಾಗಿದೆ ಎಂದರು.

ಜಿಪಂ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ನಗರಸಭೆ ನಾಮನಿರ್ದೇಶನ ಸದಸ್ಯ ಅಂಗಡಿ ರವಿಕುಮಾರ್, ನಗರಸಭೆ ಮಾಜಿ ಅಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ, ಎಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷ ಕೆ.ಮಲ್ಲೇಶಪ್ಪ, ಜಿಲ್ಲಾ ಭೋವಿ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಹಿರಿಯೂರು ರಂಗಸ್ವಾಮಿ, ಕಾರ್ಯದರ್ಶಿ ಅಜಯ್, ಗುತ್ತಿಗೆದಾರರಾದ ಸಿದ್ದಪ್ಪ,  ಮಲ್ಲೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜಪೀರ್ ಇತರರು ಉಪಸ್ಥಿತರಿದ್ದರು.

Advertisement
Tags :
Advertisement