Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ |ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮೀಕ್ಷೆ ಪ್ರಾರಂಭ

06:28 PM Feb 26, 2024 IST | suddionenews
Advertisement

ಚಿತ್ರದುರ್ಗ . ಫೆ.26   ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದನ್ವಯ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ.

Advertisement

 

ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸ್ಪಷ್ಟ ಚಿತ್ರಣ ಪಡೆಯುವ ಸಲುವಾಗಿ ಫಲಾನುಭವಿಗಳ ಸಮೀಕ್ಷೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.
ಸರ್ಕಾರದ ಸೂಚನೆಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮೀಕ್ಷೆ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸರ್ವೆ ಕಾರ್ಯ ನಡೆಸಲಿದ್ದಾರೆ.  ಮೊಬೈಲ್/ವೆಬ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಯೋಜನೆಗಳು ತಲುಪಿರುವ ಮತ್ತು ತಲುಪದಿರುವ ಕುಟುಂಬಗಳ ಸರ್ವೆ ಈ ಸಂದರ್ಭದಲ್ಲಿ ಆಗಲಿದೆ.  ಸರ್ಕಾರದ ಯೋಜನೆಗಳು ತಲುಪದ ಕುಟುಂಬಗಳ ಸಂಖ್ಯೆ ಮತ್ತು ಕಾರಣ ತಿಳಿದುಕೊಳ್ಳಲು ಕೂಡ ಈ ಸಮೀಕ್ಷೆ ನೆರವಾಗಲಿದೆ.
ಸೋಮವಾರದಂದು ಜಿಲ್ಲೆಯ ಜಾನುಕೊಂಡ, ಮೆದೆಹಳ್ಳಿ, ಕಣಿವೆಮಾರಮ್ಮ ನಗರ ಮುಂತಾದೆಡೆ ಗ್ಯಾರಂಟಿ ಯೋಜನೆಗಳ ಸಮೀಕ್ಷೆ ಪ್ರಾರಂಭಗೊಂಡಿದ್ದು, ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಲಾಗಿನ್ ಕ್ರಿಯೇಟ್ ಮಾಡಿಕೊಡಲಾಗುತ್ತಿದೆ.  ಸಮೀಕ್ಷೆ ಕಾರ್ಯವನ್ನು ಜಿಲ್ಲೆಯಲ್ಲಿ ಉತ್ತಮವಾಗಿ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

Advertisement

Advertisement
Tags :
chitradurgachitradurga districtguarantee schemesSurvey of beneficiariesಗ್ಯಾರಂಟಿ ಯೋಜನೆಚಿತ್ರದುರ್ಗಫಲಾನುಭವಿಗಳ ಸಮೀಕ್ಷೆ
Advertisement
Next Article