ಪಿಂಚಣಿ ಅದಾಲತ್ ಸದುಪಯೋಗ ಪಡೆದುಕೊಳ್ಳಿ: ಶಾಸಕ ರಘುಮೂರ್ತಿ ಕರೆ
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಚಳ್ಳಕೆರೆ: ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಏರ್ಪಡಿಸುವ ಪಿಂಚಣಿ ಅದಾಲತ್ (ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ) ಸೌಲಭ್ಯಗಳ ಸದು ಪಯೋಗವನ್ನು ಅರ್ಹರು ಪಡೆಯುವಂತೆ ಶಾಸಕ ಟಿ ರಘುಮೂರ್ತಿ ತಿಳಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪಿಂಚಣಿ ಅದಾಲತ್‌ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಅವರು ಮಾತನಾಡಿ,ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ತಲುಪಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಪ್ರತಿಯೊಬ್ಬರು ಕೈ ಜೋಡಿಸಿ ಯೋಜನೆಗಳ ಸಾಕಾರಕ್ಕೆ ಮುಂದಾಗಬೇಕು. ಕಂದಾಯ ಇಲಾಖೆಯಿಂದ ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ ವೇತನ ಮುಂತಾದ ಹಲವು ಪಿಂಚಣಿ ಯೋಜನೆ ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು. ಈ ವೇಳೆ ಪಿಂಚಣಿ ಅದಾಲತ್‌ನಲ್ಲಿ ಸ್ಥಳೀಯ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದ ಹಲವಾರು ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ಶಾಸಕರು ವಿತರಿಸಿದರು.
ಜಿಲ್ಲಾ ಉಪ ವಿಭಾಗಾಧಿಕಾರಿ ಕಾರ್ತಿಕ್ ಮಾತನಾಡಿ ಸರ್ಕಾರ ವಯೋ ವೃದ್ಧರಿಗೆ ಅಂಗವಿಕಲರಿಗೆ ಸೇರಿದಂತೆ ಇತರೆ ವರ್ಗದ ಸಾರ್ವಜನಿಕರ ಅನುಕೂಲಕ್ಕಾಗಿ ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಜಾಗೃತರಾಗಬೇಕು ಗ್ರಾಮೀಣ ಹಾಗೂ ನಗರ ಪ್ರದೇಶದ ಕಂದಾಯ ಇಲಾಖೆ ಅಧಿಕಾರಿ ವರ್ಗ ಸಾರ್ವಜನಿಕರ ಸೇವೆಗಳನ್ನು ನಿರ್ವಹಿಸಲು ವಿಳಂಬ ನೀತಿ ಅನುಸರಿಸದೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರೆಹಾನ್ ಪಾಷಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ವೀರಭದ್ರಪ್ಪ ನಗರಸಭಾ ಸದಸ್ಯರಾದ ರಮೇಶ್ ಗೌಡ ಸರ್ಕಾರದ ನಾಮನಿರ್ದೇಶಿತ ಸದಸ್ಯ ನೇತಾಜಿ ಆರ್ ಪ್ರಸನ್ನ ಕಾಂಗ್ರೆಸ್ ಮುಖಂಡ ಎಚ್ಎಸ್ ಸೈಯದ್ ಪಿಎಸ್ಐ ಸತೀಶ್ ನಾಯ್ಕ್ ಗಾದ್ರಿಲಿಂಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.