ನಾಳೆ ಶಾಸಕ ವೀರೇಂದ್ರ ಪಪ್ಪಿ ಮನೆ ಮುಂದೆ ತಮಟೆ ಚಳವಳಿ : ಬಿ.ಎ.ಲಿಂಗಾರೆಡ್ಡಿ
08:12 PM Sep 15, 2024 IST | suddionenews
Advertisement
ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 15 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಲ್ಲಿ ಉದಾಸೀನ ತೋರುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಹಾಗೂ ಎಚ್ಚರಿಸುವ ಸಂಬಂಧ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಾಳೆ (ಸೆಪ್ಟಂಬರ್ 16 ರ ಸೋಮವಾರ) ಶಾಸಕ ವೀರೇಂದ್ರ ಪಪ್ಪಿ ಅವರ ನಿವಾಸದ ಮುಂಭಾಗ ತಮಟೆ ಚಳವಳಿ ಹಮ್ಮಿಕೊಂಡಿದೆ.
Advertisement
ಚಿತ್ರದುರ್ಗ ಜೆಸಿಆರ್ ಬಡಾವಣೆಯ ಒಂದನೇ ಕ್ರಾಸ್ ನಲ್ಲಿರುವ ಶಾಸಕ ವೀರೇಂದ್ರ ಪಪ್ಪಿ ಮನೆ ಮುಂಭಾಗ ಬೆಳಿಗ್ಗೆ 11 ಗಂಟೆಯಿಂದ ತಮಟೆ ಚಳವಳಿ ಆರಂಭವಾಗಲಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ.
Advertisement