For the best experience, open
https://m.suddione.com
on your mobile browser.
Advertisement

ಉತ್ತಮ ಪ್ರಜೆಗಳನ್ನು ನಿರ್ಮಿಸಿ ಸದೃಢ ಸಮಾಜ ಕಟ್ಟುವ ಹೊಣೆಗಾರಿಕೆಯೂ ಶಿಕ್ಷಕರ ಮೇಲಿದೆ : ಸಿಇಒ ಸೋಮಶೇಖರ್ ಎಸ್.ಜೆ

04:57 PM Jan 18, 2024 IST | suddionenews
ಉತ್ತಮ ಪ್ರಜೆಗಳನ್ನು ನಿರ್ಮಿಸಿ ಸದೃಢ ಸಮಾಜ ಕಟ್ಟುವ ಹೊಣೆಗಾರಿಕೆಯೂ ಶಿಕ್ಷಕರ ಮೇಲಿದೆ   ಸಿಇಒ ಸೋಮಶೇಖರ್ ಎಸ್ ಜೆ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,

ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.18 : ಜೀವನದಲ್ಲಿ ಯಾರು ಎಷ್ಟೇ ಉನ್ನತ ಹುದ್ದೆ ಪಡೆದುಕೊಂಡರೂ ಅದರ ಹಿಂದೆ ಶಿಕ್ಷಕರುಗಳ ಮಾರ್ಗದರ್ಶನ, ಪರಿಶ್ರಮವಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಎಸ್.ಜೆ. ಹೇಳಿದರು.

ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮತ್ತು ತಾಲ್ಲೂಕು ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ಕ್ಲಬ್ ಸಹಯೋಗದಲ್ಲಿ ತ.ರಾ.ಸು.ರಂಗಮಂದಿರದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಶೈಕ್ಷಣಿಕ ಕಾರ್ಯಾಗಾರ ಉದ್ಗಾಟಿಸಿ ಮಾತನಾಡಿದರು.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು. ಮಕ್ಕಳಿಗೆ ಪಾಠ ಹೇಳಿಕೊಡುವ ಜೊತೆಗೆ ಶಿಕ್ಷಕರುಗಳಿಗೆ ಕೆಲವೊಮ್ಮೆ ಅನೇಕ ಜವಾಬ್ದಾರಿಗಳನ್ನು ವಹಿಸಲಾಗುವುದು. ಹಾಗಾಗಿ ಒತ್ತಡದ ನಡುವೆ ಶಿಕ್ಷಕರುಗಳು ಕೆಲಸ ಮಾಡಬೇಕಾಗುತ್ತದೆ. ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ನಿರ್ಮಿಸಿ ಸದೃಢ ಸಮಾಜ ಕಟ್ಟುವ ಹೊಣೆಗಾರಿಕೆಯೂ ನಿಮ್ಮ ಮೇಲಿದೆ ಎಂದು ತಿಳಿಸಿದರು.

2022-23 ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆ ಹತ್ತನೆ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿ ಕೀರ್ತಿ ತಂದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಡಿ.ಡಿ.ಪಿ.ಐ. ಕೆ.ರವಿಶಂಕರ್‍ರೆಡ್ಡಿಯವರಲ್ಲಿ ಬದ್ದತೆಯಿದೆ. ಮಕ್ಕಳ ಹಿತದೃಷ್ಟಿಯಿಂದ ಒಮ್ಮೆ ನಡುರಾತ್ರಿ ಹನ್ನೆರಡು ಗಂಟೆಯಲ್ಲಿ ನನ್ನ ಮನೆಗೆ ಬಂದು ಕಡತಕ್ಕೆ ಸಹಿ ಮಾಡಿಸಿಕೊಂಡು ಹೋದರು ಎನ್ನುವುದನ್ನು ನೆನಪಿಸಿಕೊಂಡು ಅವರಲ್ಲಿ ಬದ್ದತೆಯಿದೆ ಎಂದರು.

ವಿಜ್ಞಾನ ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸವನ್ನು ಗಮನ ಕೊಟ್ಟು ಕೇಳಿ ನಿಮ್ಮಲ್ಲಿ ಏನಾದರು ಗೊಂದಲಗಳಿದ್ದರೆ ಪರಿಹರಿಸಿಕೊಂಡು ವಿಜ್ಞಾನವನ್ನು ಸರಳೀಕರಣಗೊಳಿಸಿಕೊಂಡು ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಬೋಧಿಸಿ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿ ಮಾತನಾಡಿ ನನ್ನ ಅಧಿಕಾರವಧಿಯಲ್ಲಿ ಶಿಕ್ಷಕರುಗಳ ಏನೆ ಸಮಸ್ಯೆಗಳಿದ್ದರೂ ತಕ್ಷಣವೆ ಸ್ಪಂದಿಸುತ್ತೇನೆ. ನಿಮ್ಮಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕೆನ್ನುವುದು ನನ್ನ ಉದ್ದೇಶ. ಕಳೆದ ಸಾಲಿನಲ್ಲಿ ನಮ್ಮ ಜಿಲ್ಲೆ ಹತ್ತನೆ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದರ ಹಿಂದೆ ಅನೇಕ ಅಧಿಕಾರಿಗಳ ಹಾಗೂ ಶಿಕ್ಷಕರುಗಳ ಶ್ರಮವಿದೆ. ಪೋಷಕರು ಹಾಗೂ ಶಿಕ್ಷಕರುಗಳು ಮಕ್ಕಳಿಗೆ ಊರುಗೋಲಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.

ಶಿಕ್ಷಣಾಧಿಕಾರಿಗಳಾದ ಎನ್.ಆರ್.ತಿಪ್ಪೇಸ್ವಾಮಿ, ಸಿದ್ದಪ್ಪ, ವಿಷಯ ಪರಿವೀಕ್ಷಕರುಗಳಾದ ಗೋವಿಂದಪ್ಪ, ಸವಿತ, ಚಂದ್ರಣ್ಣ, ಬಸವರಾಜ್ ಓಲೇಕಾರ್, ಸಂಪನ್ಮೂಲ ವ್ಯಕ್ತಿ ರಾಘವೇಂದ್ರಭಟ್, ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ನಾಗೇಂದ್ರಪ್ಪ, ಚಿತ್ರದುರ್ಗ ತಾಲ್ಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ಜಿಲ್ಲಾ ವಿಜ್ಞಾನ ಶಿಕ್ಷಕರ ಕ್ಲಬ್‍ನ ಅಧ್ಯಕ್ಷ ಬಿ.ವಿ.ನಾಥ ವೇದಿಕೆಯಲ್ಲಿದ್ದರು.

ಶಿಕ್ಷಕ ಡಾ.ಕೆ.ಮಹೇಶ್ ಸೇರಿದಂತೆ ಜಿಲ್ಲೆಯ ವಿಜ್ಞಾನ ಶಿಕ್ಷಕರುಗಳು ಶೈಕ್ಷಣಿಕ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಕಳೆದ ಸಾಲಿನಲ್ಲಿ ಹತ್ತನೆ ತರಗತಿ ಪರೀಕ್ಷೆ ವಿಜ್ಞಾನದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳು, ಪಿ.ಹೆಚ್.ಡಿ. ಪಡೆದಿರುವ ವಿಜ್ಞಾನ ಸಹ ಶಿಕ್ಷಕರು, ರಾಜ್ಯ ಮತ್ತು ಜಿಲ್ಲಾ ಉತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪುರಸ್ಕøತರು ಹಾಗೂ ನಿವೃತ್ತ ವಿಜ್ಞಾನ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು.

Advertisement
Tags :
Advertisement