Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶಿಕ್ಷಕರುಗಳು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ಅನುಷ್ಟಾನಗೊಳಿಸಿ : ಡಿಡಿಪಿಐ ಎಂ.ಆರ್.ಮಂಜುನಾಥ್

07:22 PM Nov 13, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 13 : ಶಿಕ್ಷಕರುಗಳು ಕಡ್ಡಾಯವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ಅದರಂತೆ ತರಗತಿಗಳಲ್ಲಿ ಅನುಷ್ಟಾನಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ಕರೆ ನೀಡಿದರು.

Advertisement

ಕೋಟೆ ಮುಂಭಾಗವಿರುವ ಮಹಾರಾಣಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಹತ್ತನೆ ತರಗತಿ ಶಿಕ್ಷಕರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಭಾಷಾ ವಿಷಯದ ಪ್ರಶ್ನೆ ಪತ್ರಿಕೆ ತಯಾರಿಕಾ ಕಾರ್ಯಾಗಾರ-2014 ನ್ನು ಉದ್ಘಾಟಿಸಿ ಮಾತನಾಡಿದರು.

 

ಆಂಗ್ಲ ಭಾಷಾ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ ಮಕ್ಕಳ ಮನಸ್ಸಿಗೆ ನಾಟುವಂತೆ ಬೋಧಿಸಿದಾಗ ಪರೀಕ್ಷೆ ಭಯ ಕಾಡುವುದಿಲ್ಲ. ಇದರಿಂದ ಗುಣಮಟ್ಟದ ಫಲಿತಾಂಶಕ್ಕೆ ಸಹಕಾರಿಯಾಗಲಿದೆ ಎಂದು ಶಿಕ್ಷಕರುಗಳಿಗೆ ತಿಳಿಸಿದರು. ವಿದ್ಯಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ವಿಷಯ ಪರಿವೀಕ್ಷಕ ಹೆಚ್.ಟಿ.ಚಂದ್ರಣ್ಣ, ಜಿಲ್ಲಾ ಆಂಗ್ಲ ಭಾಷಾ ಕ್ಲಬ್ ಅಧ್ಯಕ್ಷ ಸಿದ್ದೇಶ್ ಸಿ.ಬಿ. ಗೌರವಾಧ್ಯಕ್ಷ ರಾಜಪ್ಪ ಎಸ್. ತಾಲ್ಲೂಕು ಆಂಗ್ಲ ಭಾಷಾ ಕ್ಲಬ್ ಅಧ್ಯಕ್ಷ ಗುರುಮೂರ್ತಿ, ಕಾರ್ಯದರ್ಶಿ ರಾಮಚಂದ್ರಪ್ಪ, ಖಜಾಂಚಿ ರಾಮಲಿಂಗಪ್ಪ, ಸಂಪನ್ಮೂಲ ಶಿಕ್ಷಕರುಗಳಾದ ಹೆಚ್.ಕೆ.ಮಹೇಶ್, ಶೋಭರಾಣಿ, ಡಿ.ಪದ್ಮಾವತಿ, ಟಿ.ಸಂತೋಷ್, ಸಿ.ಕೋಟಿಹಾಳ್, ಚಂದ್ರೇಗೌಡ, ಸರ್ಕಾರಿ ಅನುದಾನಿತ, ಅನುದಾನರಹಿತ
ಶಾಲೆಗಳ 145 ಆಂಗ್ಲ ಭಾಷಾ ಶಿಕ್ಷಕರುಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Advertisement
Tags :
bengaluruchitradurgaDDPI M.R. ManjunathkannadaKannadaNewsprepare model question paperssuddionesuddionenewsteachersಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಡಿಡಿಪಿಐ ಎಂ.ಆರ್.ಮಂಜುನಾಥ್ಬೆಂಗಳೂರುಮಾದರಿ ಪ್ರಶ್ನೆ ಪತ್ರಿಕೆಶಿಕ್ಷಕರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article