For the best experience, open
https://m.suddione.com
on your mobile browser.
Advertisement

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

07:45 PM Sep 27, 2024 IST | suddionenews
ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸುತ್ತಿರುವ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement
Advertisement

ಕಂದಾಯ ಇಲಾಖೆ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಮೊಬೈಲ್ ತಂತ್ರಾಂಶಗಳಿಂದ ಗ್ರಾಮ ಲೆಕ್ಕಾಧಿಕಾರಿಗಳು ಕೆಲಸ ನಿರ್ವಹಿಸುವುದು ಕಷ್ಟವಾಗುತ್ತಿದೆ. ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆವಿಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ರದ್ದುಪಡಿಸಿ ರಜಾ ದಿನಗಳಲ್ಲಿ ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರಬಾರದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕ/ರಾಜಸ್ವ ನಿರೀಕ್ಷಕರ ಹುದ್ದೆಗಳಿಗೆ ತಕ್ಷಣವೆ ಪದೋನ್ನತಿ ನೀಡುವಂತೆ ಪ್ರತಿಭಟನಾನಿರತ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ರಾಜ್ಯ ಗೌರವಾಧ್ಯಕ್ಷ ವಿ.ಪಾಂಡುರಂಗಪ್ಪ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ

ಕಂದಾಯ ಇಲಾಖೆ ಜಿಲ್ಲಾಧ್ಯಕ್ಷ ಬಿ.ಎಸ್.ಸಿದ್ದೇಶಿ, ತಾಲ್ಲೂಕು ಅಧ್ಯಕ್ಷ ಸಂಪತ್‍ಕುಮಾರ್ ಎಂ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಇರ್ಫಾನ್, ತಾಲ್ಲೂಕಿನ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು ಗ್ರಾಮ ಸಹಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement
Tags :
Advertisement