Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ನೌಕರರ ಸಂಘ ಒತ್ತಾಯ....!

07:57 PM Feb 03, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಫೆಬ್ರವರಿ.03  : 7ನೇ ವೇತನ ಆಯೋಗದ ವರದಿಯನ್ನು ಶೀಘ್ರ ಯಾಥಾವತ್ತಾಗಿ ಅನುಷ್ಠಾನಗೊಳಿಸಿ ಹಾಗೂ ಎನ್‌ಪಿಎಸ್ ಬದಲು ಓಪಿಎಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕು ನೌಕರರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಎನ್‌ಪಿಎಸ್ ಯೋಜನೆಯು ಸರ್ಕಾರಿ ನೌಕರರಿಗೆ ಮರಣ ಶಾಸನವಾಗಿದ್ದು ಇದನ್ನು ಕೂಡಲೇ ರದ್ದುಗೊಳಿಸಿ ಓಪಿಎಸ್ ಯೋಜನೆಯನ್ನು ಮರು ಜಾರಿ ಮಾಡಬೇಕು, ಜೊತೆಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಇದಲ್ಲದೆ ನೌಕರರ ಇತರೇ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ಆಗ್ರಹಿಸಿದರು.

ನೌಕರರ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಬರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ರಾಜ್ಯ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವ ಡಿ ಸುಧಾಕರ್ ಅವರು ಭರವಸೆ ನೀಡಿದರು.

Advertisement


ಆರ್. ಶಿವಕುಮಾರ್, ತಾಲ್ಲೂಕು ಅಧ್ಯಕ್ಷ

7ನೇ ವೇತನ ಆಯೋಗದ ವರದಿಯ ಅವಧಿ ಹೆಚ್ಚುತ್ತಾ ಹೋಗುತ್ತಿದೆ. ಇದರಿಂದ ಸರ್ಕಾರಿ ನೌಕರರ ಬೇಡಿಕೆಗಳಿಗೆ ಬೆಲೆ ಇಲ್ಲದಂತಾಗಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಕೂಡಲೇ ಸರ್ಕಾರ ಶೀಘ್ರವಾಗಿ ವರದಿ ಪಡೆದುಕೊಂಡು ಎನ್‌ಪಿಎಸ್ ಬದಲಿಗೆ ಓಪಿಎಸ್ ಯೋಜನೆಯನ್ನು ಮರು ಜಾರಿಗೊಳಿಸುವ ಮೂಲಕ ಸರ್ಕಾರಿ ನೌಕರರ ಕನಸು ನನಸು ಮಾಡಲು ಮುಂದಾಗಬೇಕೆಂದು ಸರ್ಕಾರವನ್ನು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಶಿವಕುಮಾರ್
ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ, ನೌಕರರ ಸಂಘದ ಖಜಾಂಚಿ ಎಚ್. ಕೃಷ್ಣಮೂರ್ತಿ, ಕಾರ್ಯದರ್ಶಿ ಬಿ. ರಮೇಶ್, ರಾಜ್ಯ ಪರಿಷತ್ ಸದಸ್ಯೆ ಎಚ್ ಎಂ. ಯಶೋಧ,  ಸೋಮಶೇಖರ್, ಜಿಎಸ್ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಅಧ್ಯಕ್ಷ ನಾಗನಾಯ್ಕ, ತಿಪ್ಪೇಸ್ವಾಮಿ, ವಿದ್ಯಾಧರ, ಕೆಂಪಣ್ಣ, ಅಶೋಕ್, ರಂಗಸ್ವಾಮಿ, ಲೋಕಮ್ಮ, ರಮೇಶ್ ನಾಯ್ಕ, ವಿನಯ್ ಕುಮಾರ್, ರವಿಕುಮಾರ್, ರಂಗಸ್ವಾಮಿ, ಮಂಜುನಾಥ್, ರಮೇಶ್, ಪ್ರೇಮಲತಾ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
chitradurgademandedfulfill various demandshiriyurusuddionesuddione newstaluk employees unionಒತ್ತಾಯಚಿತ್ರದುರ್ಗತಾಲೂಕು ನೌಕರರ ಸಂಘವಿವಿಧ ಬೇಡಿಕೆಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article