Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ, ದಾವಣಗೆರೆಗೆ ಇಂದು ಮಳೆಯಿಲ್ಲ.. ಎಲ್ಲೆಲ್ಲಾ ಬರಲಿದೆ ಮಳೆ..?

03:32 PM Oct 26, 2024 IST | suddionenews
Advertisement

 

Advertisement

ಬೆಂಗಳೂರು: ಕಳೆದರ ಎರಡ್ಮೂರು ವಾರದಿಂದ ಒಂದೇ ಸಮನೆ ಸುರಿದ ಮಳೆಯಿಂದ ನಿನ್ನೆಯಿಂದ ಕೊಂಚ ವಿಶ್ರಾಂತಿ ಸಿಕ್ಕಿದೆ. ಮಳೆರಾಯ ನಿಂತಿದ್ದಾನೆ. ಆದರೆ ಇಂದು ಸಂಜೆ ವೇಳೆಗೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂಬುದನ್ನು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಎಲ್ಲಾ ಜಿಲ್ಲೆಗಳಿಗೂ ಆಗಲ್ಲ ಎಂಬುದನ್ನು ತಿಳಿಸಿದೆ‌. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗುತ್ತೆ..? ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲ್ಲ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.

ಇವತ್ತಿನ ವಾತಾವರಣ ನೋಡ್ತಾ ಇದ್ರೆ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿರುವ ಪ್ರಕಾರ ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಬೆಂಗಳೂರಿ ಗ್ರಾಮಾಂತರ ಭಾಗಕ್ಕೆ ಮಳೆಯಾಗುವುದಿಲ್ಲ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ‌.

Advertisement

ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲದೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಮಳೆ ಇರುವುದಿಲ್ಲ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ದಾನಾ ಚಂಡಮಾರುತದ ಪ್ರಭಾವದಿಂದ ಹೆಚ್ಚು ಮಳೆಯಾಗುತ್ತಿತ್ತು. ಇದೀಗ ಕೇರಳದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಚಂಡಮಾರುತದ ಮುನ್ಸೂಚನೆ ಇದ್ದು, ಕೇರಳದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಪರಿಣಾಮ ಅಕ್ಟೋಬರ್ 27ರ ಬೆಳಗ್ಹೆ ತನಕ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Advertisement
Tags :
bengaluruchitradurgaDavangereRainsuddionesuddione newsಚಿತ್ರದುರ್ಗದಾವಣಗೆರೆಬೆಂಗಳೂರುಮಳೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article