Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆಗೆ ಚಿತ್ರದುರ್ಗ ಜಿಲ್ಲೆಯಿಂದ ಮೂವರ ಹೆಸರು ಪ್ರಸ್ತಾಪ

04:13 PM Nov 07, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 07 : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ ಮೂರು ದಿನಗಳ ಕಾಲ ಮಂಡ್ಯದಲ್ಲಿ ಏರ್ಪಡಿಸಲಾಗಿದೆ. ಮೂರು ದಿನಗಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗಾಗಿ ರಾಜ್ಯ ಕಾರ್ಯಕಾರಿಣಿ ಸಭೆ ಶೀಘ್ರದಲ್ಲಿ ಜರುಗಲಿದೆ.

ರಾಜ್ಯದಲ್ಲಿ ಪ್ರಕ್ರಿಯೆಯಲ್ಲಿರುವ ಉಪ ಚುನಾವಣೆಗಳು ಮುಗಿದ ತಕ್ಷಣ ರಾಜ್ಯ ಕಾರ್ಯಕಾರಿಣಿ ಸಭೆ ಕರೆಯಲಾಗುವುದು. ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗೆ ಚಿತ್ರದುರ್ಗ ಜಿಲ್ಲೆಯಿಂದ ಮೂರು ಹೆಸರುಗಳನ್ನು ಪ್ರಸ್ತಾಪಿಸಲು ಜಿಲ್ಲಾ ಕಸಾಪ ನಿರ್ಧರಿಸಿದೆ.

Advertisement

ಸಾಹಿತ್ಯ ಮತ್ತು ಕೆರೆಗಳಿಗೆ ನೀರು ತುಂಬಿಸುವ ಕಾರ್ಯದಿಂದ ಜಿಲ್ಲೆ ಮತ್ತು ರಾಜ್ಯದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು, ಸಾಹಿತಿ ಮತ್ತು ಇತಿಹಾಸಕಾರ ಡಾ.ಬಿ.ರಾಜಶೇಖರಪ್ಪ ಖ್ಯಾತ ಸಾಹಿತಿ ಬಿ.ಎಲ್.ವೇಣು ರವರನ್ನು ಹೆಸರುಗಳನ್ನು ಪ್ರಸ್ತಾಪಿಸಲು ಜಿಲ್ಲಾ ಕಸಾಪ ನಿರ್ಧರಿಸಿದೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹಲವಾರು ಚರ್ಚೆಗಳು ಜರುಗುತ್ತಿವೆ. ಜಿಲ್ಲೆಯಲ್ಲಿ ಈ ಮೂವರನ್ನು ಹೊರುತುಪಡಿಸಿ ಇನ್ನಷ್ಟು ಸಾಹಿತಿಗಳು ಅರ್ಹರಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಅವರುಗಳಿಗೆ ಆದ್ಯತೆ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಮೂವರ ಹೆಸರುಗಳನ್ನು ಚಿತ್ರದುರ್ಗ ಜಿಲ್ಲೆಯ ವತಿಯಿಂದ ರಾಜ್ಯ ಕಾರಿಣಿ ಸಭೆಯಲ್ಲಿ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಅಂತಿಮ ನಿರ್ಧಾರ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಗೊಳ್ಳಲಿದೆ. ಈ ಬಗ್ಗೆ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿಯವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Advertisement
Tags :
Akhil Bharat Kannada Sahitya Sammelnabengaluruchitradurgachitradurga districtelectionPresidentsuddionesuddione newsಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಚಿತ್ರದುರ್ಗಚಿತ್ರದುರ್ಗ ಜಿಲ್ಲೆಬೆಂಗಳೂರುಸರ್ವಾಧ್ಯಕ್ಷರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article