Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮೂರು ಬಾರಿ ಚಿತ್ರದುರ್ಗದ ಸಂಸದರಾಗಿದ್ದ  ಸಿ.ಪಿ. ಮೂಡಲಗಿರಿಯಪ್ಪ ನಿಧನ

02:33 PM Mar 23, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.23 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಸಿರಾ ಕ್ಷೇತ್ರದ ಮಾಜಿ ಶಾಸಕ ಸಿ.ಪಿ. ಮೂಡಲಗಿರಿಯಪ್ಪ (85 ವರ್ಷ) ಇಂದು (ಶನಿವಾರ) ಮಧ್ಯಾನ್ಹ 1 ಗಂಟೆ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಸೊರಾ ಕ್ಷೇತ್ರದ ಮಾಜಿ ಶಾಸಕ ರಾಜೇಶ್ ಅವರನ್ನು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.  ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕಾಗಿ ಬೆಂಗಳೂರು ನಿವಾಸ ಮಹಾಲಕ್ಷ್ಮಿ ಲೇಔಟ್  ನಿವಾಸದಲ್ಲಿ ಮಧ್ಯಾಹ್ನ 2 ರಿಂದ 3.30 ಗಂಟೆಯ ವರೆಗೆ, ಸಂಜೆ  5 ಗಂಟೆಗೆ ತುಮಕೂರು ಕುಂಚಿಟಿಗರ ಸಂಘ (ಕೋತಿತೋಪು ) ಸಂಜೆ 6.30. ಕ್ಕೆ ಗಂಟೆಗೆ ಶಿರಾ ರಂಗನಾಥ ಕಾಲೇಜು (ಕುಂಚಿಟಿಗರ ಸಂಘ ) ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಅಂತಿಮ ಸಂಸ್ಕಾರ ಬೆಳಿಗ್ಗೆ 10 ಗಂಟೆಗೆ ಚಿರತಹಳ್ಳಿ ತೋಟದಮನೆಯಲ್ಲಿ  (ಗಣೇಶ ಗುಡಿ ಎಸ್ಟೇಟ್) ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದಲ್ಲಿ  24 ಜೂನ್ 1940 ರಂದು ಜನಿಸಿದರು. ಶಿಕ್ಷಣವನ್ನು ಸರ್ಕಾರಿ ಕಾನೂನು ಕಾಲೇಜು ಮತ್ತು ಬೆಂಗಳೂರು ವಿಶ್ವವಿದ್ಯಾಲಯ , ಬೆಂಗಳೂರು (ಕರ್ನಾಟಕ) ದಿಂದ ಬಿಎ ಮತ್ತು ಬಿಎಲ್‌ನಲ್ಲಿ ಪೂರ್ಣಗೊಳಿಸಿದರು.

1989 -1991ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ನಂತರ 1991-1996 ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾದರು.

1979 ಮತ್ತು 1982ಜಿಲ್ಲಾ ಕಾಂಗ್ರೆಸ್ ಸಮಿತಿ (ಇಂದಿರಾ) ಡಿಸಿಸಿ (ಐ), ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾಗಿದ್ದರು.  197 ಮತ್ತು 1989ಕರ್ನಾಟಕದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಇಂದಿರಾ) ಪಿಸಿಸಿ (ಐ) ಕಾನೂನು ಕೋಶದ ಅಧ್ಯಕ್ಷರಾಗಿದ್ದರು.

ನಂತರ 1980 ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಸಂವಿಧಾನ ತಿದ್ದುಪಡಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದಾದ ಬಳಿಕ 1985 ಮತ್ತು 1989 ಸಿರಾ ಕ್ಷೇತ್ರದ ವಿಧಾನಸಭಾ ಸದಸ್ಯರಾದರು. ಜೊತೆಗೆ  ಅಧೀನ ಶಾಸನ ಸಮಿತಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದರು. 1989 ಹಾಗೂ 1991 ಚಿತ್ರದುರ್ಗದಿಂದ 9 ನೇ ಲೋಕಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. ಇದರ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕವಾದರು. 1991 ಮತ್ತು 1996 ಚಿತ್ರದುರ್ಗದಿಂದ 10 ನೇ ಲೋಕಸಭೆಯಲ್ಲಿ ಸಂಸದರಾಗಿ ಜಯಗಳಿಸಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಸಾರ್ವಜನಿಕ ವಿತರಣಾ ಸಮಿತಿಯ ಸದಸ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪಸಮಿತಿ-ಎ.
ಸದನದ ಸಭೆಗಳಿಗೆ ಸದಸ್ಯರ ಗೈರುಹಾಜರಿ ಸಮಿತಿಯ ಸದಸ್ಯ. ಕಾರ್ಮಿಕ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ಈಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸಂತಾಪ : ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ನಿಧನಕ್ಕೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಟಿ. ವೆಂಕಟೇಶ್ ಸಂತಾಪ ಸೂಚಿಸಿದ್ದಾರೆ. ಮೂಡಲಗಿರಿಯಪ್ಪನವರು ಓರ್ವ ಮಾದರಿ ರಾಜಕಾರಣಿಯಾಗಿದ್ದರು. ಅವರು ಪ್ರತಿಯೊಬ್ಬ ಕಾರ್ಯಕರ್ತರನ್ನು ಬಹಳ ಗೌರವದಿಂದ ಕಾಣುತ್ತಿದ್ದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಜಿಲ್ಲೆಯ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು. ಅವರು ನಮ್ಮಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿಯಾಗಿದ್ದರು. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

Advertisement
Tags :
bengaluruchitradurgaMP C.P. Mudalagiriappapassed awaysuddionesuddione newsThree timesಚಿತ್ರದುರ್ಗನಿಧನ ವಾರ್ತೆಬೆಂಗಳೂರುಸಂಸದಸಿ.ಪಿ. ಮೂಡಲಗಿರಿಯಪ್ಪಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article