For the best experience, open
https://m.suddione.com
on your mobile browser.
Advertisement

ಸಚಿವ ಸತೀಶ್‍ಜಾರಕಿಹೊಳಿಯವರಿಗೆ ರಾಜ್ಯದ ಚುಕ್ಕಾಣಿ ಹಿಡಿಯುವ ಅವಕಾಶ ಸಿಗಲಿ : ಶಾಸಕ ಟಿ.ರಘುಮೂರ್ತಿ

06:05 PM Dec 07, 2024 IST | suddionenews
ಸಚಿವ ಸತೀಶ್‍ಜಾರಕಿಹೊಳಿಯವರಿಗೆ ರಾಜ್ಯದ ಚುಕ್ಕಾಣಿ ಹಿಡಿಯುವ ಅವಕಾಶ ಸಿಗಲಿ   ಶಾಸಕ ಟಿ ರಘುಮೂರ್ತಿ
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 07 : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿರುವುದು ಪಕ್ಷಕ್ಕೆ ಶಕ್ತಿ ಬಂದಂತಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ವಿಧಾನಸಭೆ ಉಪ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಶ್ರಮವೆಷ್ಟಿದೆಯೋ ಅಷ್ಟೆ ಕಾರ್ಯಕರ್ತರ ಕೊಡುಗೆಯೂ ಇದೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಿದೆ. ಅಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು. ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸೋಲುಂಟಾಗಿದೆ. ಮುಂದೆ ಸರಿಪಡಿಸಿಕೊಳ್ಳಬೇಕಾಗಿರುವುದರಿಂದ ಕಾರ್ಯಕರ್ತರು ಒಗ್ಗಟ್ಟಿನಿಂದಿದ್ದು, ಪಕ್ಷದ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ ಸಚಿವ ಸತೀಶ್‍ಜಾರಕಿಹೊಳಿರವರ ಆಲೋಚನೆ, ಯೋಜನೆಗಳೆ ವಿಭಿನ್ನವಾಗಿರುತ್ತವೆ. ಯಾವಾಗಲು ಪಕ್ಷ ಸಂಘಟನೆ ಬಗ್ಗೆ ಚಿಂತಿಸುತ್ತಿರುತ್ತಾರೆ. ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಇವರ ಪಾತ್ರ ಬಹಳಷ್ಟಿದೆ. ಮುಂದೆ ರಾಜ್ಯದ ಚುಕ್ಕಾಣಿ ಹಿಡಿಯುವ ಅವಕಾಶ ಸಿಗಲಿ ಎಂದು ಹಾರೈಸಿದರು.

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡುತ್ತ ರಾಜ್ಯದ ಮೂರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಚಿವ ಸತೀಶ್‍ಜಾರಕಿಹೊಳಿರವರ ಪರಿಶ್ರಮವಿದೆ ಎಂದು ಸ್ಮರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಬಿ.ಯೋಗೇಶ್‍ಬಾಬು, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹೆಚ್.ಅಂಜಿನಪ್ಪ,

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿಗೌಡ, ಕೆ.ಪಿ.ಸಿ.ಸಿ.ಕೋಆರ್ಡಿನೇಟರ್ ಜಿ.ಎಸ್.ಕುಮಾರ್‍ಗೌಡ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ನಗರಸಭೆ ಸದಸ್ಯ ನರಸಿಂಹಮೂರ್ತಿ, ನಾಮನಿರ್ದೇಶಕ ಸದಸ್ಯ ಟಿ.ನರಸಿಂಹಮೂರ್ತಿ, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಕಕ್ಷ ಆರ್.ಶಿವಣ್ಣ ವೇದಿಕೆಯಲ್ಲಿದ್ದರು.

Tags :
Advertisement