Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಫೆಬ್ರವರಿ 8ರಂದು ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ತರಬೇತಿ ಕಾರ್ಯಕ್ರಮ

06:56 PM Feb 05, 2024 IST | suddionenews
Advertisement

ಚಿತ್ರದುರ್ಗ. ಫೆ.05:  ಹಿರಿಯೂರು ತಾಲ್ಲೂಕಿನ ಬಬ್ಬೂರು  ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.8ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಡಿಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement

ಕಾರ್ಯಕ್ರಮದಲ್ಲಿ ಡಾ. ನಾಗರಾಜ್ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗ, ಡಾ. ಸುದೀಪ್ ತೋಟಗಾರಿಕೆ ತಜ್ಞರು, ಡಾ. ಸ್ವಾತಿ ಕೀಟಶಾಸ್ತ್ರತಜ್ಞರು ಮತ್ತು ಡಾ. ಕಿರಣ್, ರೋಗಶಾಸ್ತ್ರಜ್ಞರು ಇವರು ಅಡಿಕೆ ಬೆಳೆಯಲ್ಲಿ ತಳಿಗಳ ಆಯ್ಕೆ, ಬೇಸಾಯಕ್ರಮ, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆಯ ಕುರಿತು ಪ್ರಾತ್ಯಕ್ಷಿಕೆ ನೀಡುವರು.

ಆಸಕ್ತ 50 ಜನರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಶ್ರೀ ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ (8277931058), ಶ್ರಿಮತಿ ಉಷಾರಾಣಿ ಎಂ., ಸಹಾಯಕ ಕೃಷಿ ನಿರ್ದೇಶಕರು (ರೈ.ಮ) (9980730696), ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959),  ಶ್ರೀ ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931028) ಮತ್ತು ಪವಿತ್ರಾ ಎಂ. ಜೆ. (9535412286) ರವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

Advertisement

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆಯ ಕಾಂಪೋಸ್ಟ್ ಕಲ್ಚರ್‍ನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement
Tags :
chitradurganut shellstraining programಅಡಿಕೆ ಸಿಪ್ಪೆಕಾಂಪೋಸ್ಟ್ ತಯಾರಿಕೆಚಿತ್ರದುರ್ಗತರಬೇತಿ ಕಾರ್ಯಕ್ರಮ
Advertisement
Next Article