For the best experience, open
https://m.suddione.com
on your mobile browser.
Advertisement

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ ...!

10:14 PM May 10, 2024 IST | suddionenews
ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ
Advertisement

Advertisement
Advertisement

ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

ಹೊಳೆನರಸೀಪುರದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಮೇಲೆ ಕೇಸ್​ ಒಂದು ದಾಖಲಾಗಿತ್ತು. ಅದೇ ಮಹಿಳೆ ವಿರುದ್ಧ ಹೆಬ್ಬಾಳದಲ್ಲಿ ದೇವರಾಜೇಗೌಡ ಕೂಡ ದೂರು ದಾಖಲಿಸಿದ್ದರು.

Advertisement

ಈ ಬಗ್ಗೆ ಹೊಳೆನರಸೀಪುರ ಪೋಲಿಸರು ಹಿರಿಯೂರು ಗ್ರಾಮಾಂತರ ಪೋಲಿಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯೂರು ಗ್ರಾಮಾಂತರ ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.

Advertisement

Tags :
Advertisement