Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ನೀಡಿ: ಶಾಸಕ ಟಿ.ರಘುಮೂರ್ತಿ

06:45 PM Jun 26, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಚಿತ್ರದುರ್ಗ ತಾಲ್ಲೂಕುಗಳಲ್ಲಿ ದೇವರ ಎತ್ತುಗಳು ಹೆಚ್ಚಾಗಿವೆ. ಈ ದೇವರ ಎತ್ತುಗಳ ನಿರ್ವಹಣೆಗೆ ಟ್ರಸ್ಟ್ ರಚನೆ ಮಾಡಿ ಅನುದಾನ ನೀಡಲು ಕ್ರಮವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕಿ ಇಂದಿರಾಬಾಯಿ ಅವರಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Advertisement

ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ಬರವಂತೆ ಮಾಡಬೇಕು ಎಂದು ಸೂಚಿಸಿದರು.

Advertisement
Tags :
bengaluruchitradurgaGod's bullsMla t. Raghumurthysuddionesuddione newstrustಅನುದಾನ ನೀಡಿಚಿತ್ರದುರ್ಗಟ್ರಸ್ಟ್ದೇವರ ಎತ್ತುಬೆಂಗಳೂರುಶಾಸಕ ಟಿ.ರಘುಮೂರ್ತಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article