Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆ : ಬಾಕಿ ಪ್ರಕರಣಗಳನ್ನು ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಪಡಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

05:17 PM Dec 12, 2024 IST | suddionenews
Advertisement

ಚಿತ್ರದುರ್ಗ. ಡಿ.12: ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಪಡಿಸುವ ಪ್ರಕರಣಗಳನ್ನು ನಿಯಾಮಾನುಸಾರ ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

Advertisement

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕಾ ಅದಾಲತ್‍ನಲ್ಲಿ ಇತ್ಯರ್ಥಪಡಿಸುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಕಾಮಗಾರಿ ಪ್ರಾರಂಭಿಸಬೇಕು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮುಂದಿನ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ  ರೈಲ್ವೆ ಮಾರ್ಗದ  ವಿಭಾಗೀಯ ಅಭಿಯಂತರ ರಜತ್ ತೆನಿಯಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ಮತ್ತಿತರರು ಇದ್ದರು.

Advertisement
Tags :
bengaluruchitradurgaDavangeredirect railway projectDistrict Collector T. VenkateshkannadaKannadaNewsLok Adalatsuddionesuddionenewstumkurಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಜಿಲ್ಲಾಧಿಕಾರಿ ಟಿ.ವೆಂಕಟೇಶ್ತುಮಕೂರುದಾವಣಗೆರೆನೇರ ರೈಲ್ವೆ ಯೋಜನೆಬಾಕಿ ಪ್ರಕರಣಬೆಂಗಳೂರುಲೋಕ್ ಅದಾಲತ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article