ಚಿತ್ರದುರ್ಗದಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ ಕೇಂದ್ರ ಸಚಿವ ಸೋಮಣ್ಣ..!
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವುದನ್ನು ವಿಪಕ್ಷ ನಾಯಕರು ಇನ್ನು ಬಿಟ್ಟಿಲ್ಲ. ಇಂದು ಕೇಂದ್ರ ಸಚಿವ ವಿ.ಸೋಮಣ್ಣ, ಸಿದ್ದರಾಮಯ್ಯ ಅವರು ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಲಿ ಎಂದಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿ, ನಾವು ಯಾರು ಕೂಡ ಅವರ ಕೈ ಹಿಡಿದಿಲ್ಲ. ಒಂದು ತಪ್ಪು ಮಾಡಲು ಹೋಗಿ ಹತ್ತು ತಪ್ಪು ಮಾಡುತ್ತಿದ್ದಾರೆ. ತಮ್ಮ ಕಾಲ ಮೇಲೆ ತಾವೇ ಕಲ್ಲು ಹಾಕಿಕೊಂಡು ಗಾಯ ಮಾಡಿಕೊಂಡಿದ್ದಾಗಿ ನಾನು ಈ ಹಿಂದೆ ಹೇಳಿದ್ದೆ. ಕಾನೂನಿಗಿಂತ ದೊಡ್ಡವರು ನಾವಲ್ಲ, ಅವರ ಬಗ್ಗೆ ತುಂಬಾ ಗೌರವ ಇದ್ದು ಮುಖ್ಯಮಂತ್ರಿ ಆಗಿ ಮಾತನಾಡುವುದು ಸರಿಯಲ್ಲ. ದಯಮಾಡಿ ಅವರು ರಾಜೀನಾಮೆ ಕೊಟ್ಟು ಕ್ಲೀನ್ ಚಿಟ್ ಪಡೆದು ಮತ್ತೆ ಮುಖ್ಯಮಂತ್ರಿ ಆಗಲಿ. ನಮ್ಮೆಲ್ಲರಿಗೂ ಕೂಡ ಆತ್ಮಸಾಕ್ಷಿಗಿಂತ ನೈತಿಕತೆ ದೊಡ್ಡದಾಗಿದ್ದು ಸಿದ್ದರಾಮಯ್ಯ ಅವರು ರಾಜೀನಾಮೆ ಕ್ಲೀನ್ ಚಿಟ್ ಪಡೆದು ಪುನಃ ಮುಖ್ಯಮಂತ್ರಿಯಾಗಲಿ ಎಂದು ವಿ ಸೋಮಣ್ಣ ಹೇಳಿದ್ದಾರೆ.
ಇದೆ ವೇಳೆ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಮಾತನಾಡಿ, ಶೀಘ್ರವೇ 5300ಕೋಟಿ ಅನುದಾನ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ದೇವೆ ಎಂದಿದ್ದಾರೆ.
ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸಿಎಂ ಆತ್ಮಸಾಕ್ಷಿಗೆ ಅನುಗುಣ ನಡೆಯುವ ಹೇಳಿಕೆಗೆ ಟಾಂಗ್ ನೀಡಿ ನಿಮ್ಮದಲ್ಲದ ಸೈಟ್‍ಗೆ ಪರಿಹಾರ ಕೇಳೋದು ಆತ್ಮಸಾಕ್ಷಿಯಾ? ಬೇನಾಮಿ ಆಸ್ತಿ ಪಡೆದುಕೊಳ್ಳುವುದು ಆತ್ಮಸಾಕ್ಷಿಯಾ? ಕೋರ್ಟ್ ಆದೇಶ ಆದ ದಿನವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತುಈಗಲೂ ಕಾಲ ಮಿಂಚಿಲ್ಲ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ಎಂದರು.