For the best experience, open
https://m.suddione.com
on your mobile browser.
Advertisement

TVS JUPITER 110 : ಚಿತ್ರದುರ್ಗದ ಮಾರುಕಟ್ಟೆಗೆ ಲಗ್ಗೆಯಿಟ್ಟ ಅತ್ಯಾಧುನಿಕ ಟಿವಿಎಸ್ ಜುಪಿಟರ್ 110

05:16 PM Sep 04, 2024 IST | suddionenews
tvs jupiter 110   ಚಿತ್ರದುರ್ಗದ ಮಾರುಕಟ್ಟೆಗೆ ಲಗ್ಗೆಯಿಟ್ಟ ಅತ್ಯಾಧುನಿಕ ಟಿವಿಎಸ್ ಜುಪಿಟರ್ 110
Advertisement

TVS JUPITER 110, ಚಿತ್ರದುರ್ಗ,  ಮಾರುಕಟ್ಟೆಗೆ ಲಗ್ಗೆಯಿಟ್ಟ ಅತ್ಯಾಧುನಿಕ ಟಿವಿಎಸ್ ಜುಪಿಟರ್ 110

Advertisement
Advertisement

TVS JUPITER 110: Latest TVS Jupiter 110 launched in Chitradurga

Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಶೋರೂಂ ಶ್ರೀ ಅಹೋಬಲ ಟಿವಿಎಸ್ ನಲ್ಲಿ ನೂನವಾಗಿ ಮಾರುಕಟ್ಟೆಗೆ ಬಂದಿರುವ ಜುಪಿಟರ್ 110 ಸಿಸಿ ದ್ವಿಚಕ್ರ ವಾಹನವನ್ನು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ ಕಾಳಿಸಂಗೆ ಅವರು ಬಿಡುಗಡೆಗೊಳಿಸಿದರು.

Advertisement

ಈ ಸಂದರ್ಭದಲ್ಲಿ ಟಿವಿಎಸ್ ಕಂಪನಿಯ ಟೆರೇಟೋರಿ ಮ್ಯಾನೇಜರ್  ಉಮಾ ಮತ್ತು ಅಭಿಷೇಕ್, ಶ್ರೀ ಅಹೋಬಲ ಟಿವಿಎಸ್ ಮಾಲೀಕ ಪಿ.ವಿ.ಅರುಣ್ ಕುಮಾರ್, ಸೇರಿದಂತೆ ಶೋರೂಂ ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಈ ಗ್ರಾಂಡ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110
ಹೊಚ್ಚ ಹೊಸ ಜುಪಿಟರ್ 110 (TVS Jupiter 110) ವಾಹನದ ವೈಶಿಷ್ಟ್ಯಗಳು :

ಸ್ಕೂಟರ್‌ ಅತ್ಯಾಕರ್ಷಕ ವಿನ್ಯಾಸವನ್ನು ಹೊಂದಿದೆ. ಮುಂಭಾಗದಲ್ಲಿ (ಫ್ರಂಟ್) ವಿನೂತನವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್‌ನೊಂದಿಗೆ ವಿಶಾಲವಾಗಿರುವ (ವೈಡ್) ಎಲ್ಇಡಿ ಡಿಆರ್‌ಎಲ್‌ನ್ನು ಪಡೆದಿದೆ. ಹಿಂಭಾಗದ (ರೇರ್) ವಿನ್ಯಾಸವು ಉತ್ತಮವಾಗಿದ್ದು, ಎಮರ್ಜೆನ್ಸಿ ಬ್ರೇಕ್ ವಾರ್ನಿಂಗ್ ಲೈಟ್ ಒಳಗೊಂಡಿರುವ ಎಲ್ಇಡಿ ಲೈಟ್ ಬಾರ್‌ನ್ನು ಹೊಂದಿದೆ.

ಇಷ್ಟೇ ಅಲ್ಲದೇ ಇನ್ನೂ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಇಂಟಲಿಜೆಂಟ್ ಸ್ಟಾರ್ಟ್/ ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ಯುಎಸ್‌‍ಬಿ ಚಾರ್ಜರ್, 2 ಲೀಟರ್ ಗ್ಲೋವ್ ಬಾಕ್ಸ್, 33 ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸೋರೇಜ್ ಅನ್ನು ಹೊಂದಿದೆ.

ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) 220 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ನ್ನು ಪಡೆದಿದೆ. ಹಾಗೆಯೇ, ಮುಂದೆ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂದೆ ಗ್ಯಾಸ್ ಫೀಲ್ಡ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. 12-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದ್ದು, ಟೈರ್‌ಗಳು ಕೂಡ ಉತ್ತಮವಾಗಿವೆ.

ಇಂಟಲಿಜೆಂಟ್ ಸ್ಟಾರ್ಟ್-ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ನೂತನವಾಗಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಪಡೆದಿದೆ. ಇದು ಕಾಲ್, ಟೆಕ್ಸ್ಟ್ ನೋಟಿಫಿಕೇಶನ್, ಫ್ಯುಯೆಲ್ ಎಕಾನಮಿ, ನ್ಯಾವಿಗೇಷನ್ ಸೇರಿದಂತೆ ಇನ್ನಿತರೇ ಮಾಹಿತಿಯನ್ನು ಸವಾರರಿಗೆ ಒದಗಿಸುತ್ತದೆ.

ಬೆಲೆ : ಎಕ್ಸ್ ಶೋ ರೂಂ ಬೆಲೆ- 77400, 86150, 90150 ಮೂರು ಬೆಲೆಯಲ್ಲಿ ಮಾರುಟ್ಟೆಗೆ ಲಗ್ಗೆ ಇಟ್ಟಿದೆ.

Tags :
Advertisement