Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

04:36 PM Feb 28, 2024 IST | suddionenews
Advertisement

 

Advertisement

ಚಿತ್ರದುರ್ಗ. ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ ನಿಯಮಗಳು “2ಸಿ”ರಲ್ಲಿ ಮಗು (1) ಕಲಂ 3ರ ನಿಬಂಧನೆಗಳು ಜಾರಿಯಲಿದ್ದು, ಈ ನಿಯಮಾನುಸಾರ ಬಾಲ ನಟರು ಹಾಗೂ ಬಾಲ ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ಅಥವಾ ಧಾರವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೆ ಆಯೋಜಕರು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯ.

ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1896ರ ಕರ್ನಾಟಕ ನಿಯಮಗಳು “2ಸಿ”ರಲ್ಲಿ ಒಬ್ಬ ಕಲಾವಿದನಾಗಿ ಬಾಲ ನಟ/ನಟಿಯಾಗಿ ಕೆಲಸವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ  ಪ್ರಕರಣ, ನಿರ್ಲಕ್ಷ್ಯ, ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು. ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು.

Advertisement

ಮಕ್ಕಳ ನಟನಾ ಕೆಲಸದ ಚಟುವಟಿಕೆ ನಟನೆಗೆ ಭಾಗವಹಿಸುವ ಮಕ್ಕಳ ಪೋಷಕರ, ಪಾಲಕರ ಒಪ್ಪಿಗೆ ಪತ್ರವನ್ನು ಪಡೆದು ಸಿನಿಮಾ ಅಥವಾ ಧಾರವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೆ ಆಯೋಜಕರು ಕಡ್ಡಾಯವಾಗಿ ಪ್ರದೇಶ ಕಾರ್ಯವ್ಯಾಪ್ತಿಯ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿಯೊಂದಿಗೆ ಮುಚ್ಚಳಿಕೆ ಪತ್ರವನ್ನು ಮತ್ತು ನಮೂನೆ “ಸಿ” ಯಲ್ಲಿ ಜಿಲ್ಲಾ ದಂಡಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿ ಜಿ.ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.

Advertisement
Tags :
bengaluruchild actorschildrenchitradurgaDC permissionmandatorysuddionesuddione newsಅನುಮತಿಕಡ್ಡಾಯಚಿತ್ರದುರ್ಗಜಿಲ್ಲಾಧಿಕಾರಿಪಾತ್ರಬಳಕೆಬಾಲನಟಬೆಂಗಳೂರುಮಕ್ಕಳುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article