For the best experience, open
https://m.suddione.com
on your mobile browser.
Advertisement

ನೀರನ್ನು ಮಿತವಾಗಿ ಬಳಸಿ ಜಲಸುರಕ್ಷತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿ : ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

07:17 PM Mar 22, 2024 IST | suddionenews
ನೀರನ್ನು ಮಿತವಾಗಿ ಬಳಸಿ ಜಲಸುರಕ್ಷತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿ   ಡಾ ಜಿ ಎನ್ ಮಲ್ಲಿಕಾರ್ಜುನಪ್ಪ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 22 : ಅಮೂಲ್ಯವಾದ ನೀರನ್ನು ಮಿತವಾಗಿ ಬಳಸಿ ಜಲಸುರಕ್ಷತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಚಿತ್ರದುರ್ಗ ಸೈನ್ಸ್ ಪೌಂಡೇಷನ್ ಅಧ್ಯಕ್ಷರು ಹಾಗೂ ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಕರೆ ನೀಡಿದರು.

Advertisement
Advertisement

ಚಿತ್ರದುರ್ಗ ಸೈನ್ಸ್ ಫೌಂಡೇಷನ್ ವತಿಯಿಂದ ಪಿ.ವಿ.ಎಸ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಶುಕ್ರವಾರ ಏರ್ಪಡಿಸಲಾಗಿದ್ದ ವಿಶ್ವ ಜಲದಿನ ಉದ್ಗಾಟಿಸಿ ಮಾತನಾಡಿದರು.

ನೀರಿಲ್ಲದೆ ಬದುಕಿಲ್ಲ. ಕಡಿಮೆ ಲಭ್ಯವಿರುವ ನೀರನ್ನು ಸಂರಕ್ಷಿಸಿಕೊಂಡು ಮುಂದಿನ ಪೀಳಿಗೆಗೆ ಉಳಿಸದಿದ್ದರೆ ಶಪಿಸುವುದು ಗ್ಯಾರೆಂಟಿ. ಶುದ್ದವಾದ ನೀರಿನ ಪ್ರಮಾಣ ಕಡಿಮೆಯಾಗಿದೆ. ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತದೆ. ಆಹಾರ ಕೂಡ ರಾಸಾಯನಿಕದಿಂದ ಕೂಡಿದೆ. ಬಹಳಷ್ಟು ಯುದ್ದಗಳು ನೀರಿನ ಹಂಚಿಕೆಗಾಗಿ ನಡೆಯುತ್ತಿವೆ. ನೀರಿನ ಸದ್ಬಳಕೆ ಮೂಲಕ ಶಾಂತಿ ಕಂಡುಕೊಳ್ಳಬಹುದು ಎಂದು ಹೇಳಿದರು.

ಶಿಕ್ಷಕರುಗಳಿಂದ ಮಾತ್ರ ದೇಶದಲ್ಲಿ ಬದಲಾವಣೆ ತರಲು ಸಾಧ್ಯ. ಈ ನಿಟ್ಟಿನಲ್ಲಿ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳು ಪುಸ್ತಕಗಳ ಆಚೆಗೆ ಸಾಕಷ್ಟು ವಿಚಾರಗಳನ್ನು ತಿಳಿದುಕೊಳ್ಳಬೇಕಿದೆ. ಕ್ರಿಯಾಶೀಲ ಶಿಕ್ಷಕನಿಂದ ಸೃಜನಶೀಲ ಪ್ರಜೆಗಳನ್ನು ಸೃಷ್ಠಿಸಬಹುದು. ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹನಿ ಹನಿ ನೀರನ್ನು ವ್ಯರ್ಥವಾಗಲು ಬಿಡದೆ ಮಿತವಾಗಿ ಬಳಸಬೇಕು.

ಧಾರ್ಮಿಕ ಆಚರಣೆಗಳಿಂದ ನೈಸರ್ಗಿಕ ನದಿ ನೀರು ಕಲುಷಿತಗೊಳ್ಳುತ್ತಿದೆ. ಕಾನೂನು ಎಲ್ಲಿ ಪರಿಣಾಮಕಾರಿಯಾಗಿ ಇರುವುದಿಲ್ಲವೋ ಅಲ್ಲಿ ಅಭಿವೃದ್ದಿ ಕಾಣುವುದು ಕಷ್ಟ. ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ ಮುಖ್ಯ. ಆಗ ಮಾತ್ರ ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ತೆಗೆಯಬಹುದು. ನೀರಿನ ಬಳಕೆಗೆ ತಗುಲುವ ವೆಚ್ಚವೆಷ್ಟೆಂಬ ಪರಿಜ್ಞಾನ ಎಲ್ಲರಲ್ಲಿಯೂ ಇರಬೇಕು ಎಂದು ತಿಳಿಸಿದರು.

ಚಿತ್ರದುರ್ಗ ಸೈನ್ಸ್ ಫೌಂಡೇಷನ್ ನಿರ್ದೇಶಕರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಈ.ರುದ್ರಮುನಿ ಮಾತನಾಡಿ ಜಲ ಎನ್ನುವುದು ಅತ್ಯಂತ ಗಂಭೀರವಾದ ವಿಷಯವಾಗಿರುವುದರಿಂದ ಪ್ರತಿಯೊಬ್ಬರು ನೀರು ಸಂರಕ್ಷಣೆ ಕಡೆ ಜಾಗೃತಿ ವಹಿಸಬೇಕು. ನೀರಿನ ಮಹತ್ವವನ್ನು ಅರಿತು 1992-93 ರಲ್ಲಿ ವಿಶ್ವಸಂಸ್ಥೆ ಮಾ.22 ರಂದು ವಿಶ್ವಜಲ ದಿನವನ್ನಾಗಿ ಘೋಷಿಸಿತು. ಅಂದಿನಿಂದ ಇಲ್ಲಿಯವರೆಗೂ ಪ್ರತಿವರ್ಷವೂ ವಿಶ್ವಜಲ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಸಕಲ ಜೀವರಾಶಿಗಳಿಗೂ ಅತ್ಯವಶ್ಯಕ ಸಂಪನ್ಮೂಲಗಳಲ್ಲಿ ನೀರು ಬಹಳ ಮುಖ್ಯ. ನೀರಿನ ಮಿತಬಳಕೆ ಬಗ್ಗೆ ಎಲ್ಲರಲ್ಲಿಯೂ ಅರಿವು ಮೂಡಿಸಬೇಕಿದೆ. ಜಲಮೂಲಗಳು ಮಾಲಿನ್ಯವಾಗಿರುವುದರಿಂದ ಮಕ್ಕಳಲ್ಲಿ ನೀರಿನ ಕುರಿತು ಅರಿವು ಮೂಡಿಸಬೇಕು. ಕೊಳವೆಬಾವಿ ಕೊರೆಸಿ ಅಂತರ್ಜಲವನ್ನು ಬರಿದು ಮಾಡಲಾಗಿದೆ. ಮುಂದಿನ ಪೀಳಿಗೆಗೆ ನೀರಿನ ಅಭಾವವಾಗಲಿದೆ. ಅದಕ್ಕಾಗಿ ನೀರನ್ನು ವ್ಯರ್ಥವಾಗಿ ಬಳಸದೆ ಸಂಪನ್ಮೂಲವನ್ನು ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ವೈಜ್ಞಾನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದರು.

ಪಿ.ವಿ.ಎಸ್. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಎಸ್.ಆರ್.ಉಷಾ ಅಧ್ಯಕ್ಷತೆ ವಹಿಸಿದ್ದರು.  ಚಿತ್ರದುರ್ಗ ಸೈನ್ಸ್ ಫೌಂಡೇಷನ್ ಉಪಾಧ್ಯಕ್ಷ ಚಳ್ಳಕೆರೆ ಯರ್ರಿಸ್ವಾಮಿ, ಖಜಾಂಚಿ ನಾಗಲಿಂಗರೆಡ್ಡಿ, ಕಾರ್ಯದರ್ಶಿ ಎಚ್.ಎಸ್.ಟಿ. ಸ್ವಾಮಿ, ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ವೇದಿಕೆಯಲ್ಲಿದ್ದರು.

Advertisement
Tags :
Advertisement