Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

08:09 AM Apr 26, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ.

Advertisement

ಚಿತ್ರದುರ್ಗ ನಗರದ ವಿಪಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ಮತದಾರರು ಸಾಲುಗಟ್ಟಿ ನಿಂತಿರುವ ದೃಶ್ಯ

Advertisement

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಬೆಳಗ್ಗೆ ಏಳು ಗಂಟೆಗೆ ಮತದಾರರು ಸಾಲುಗಟ್ಟಿ ನಿಂತು ಮತದಾನ ಮಾಡುತ್ತಿದ್ದಾರೆ.

 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಸಿರಾ ಮತ್ತು ಪಾವಗಡ ಕ್ಷೇತ್ರಗಳಲ್ಲಿನ ವಿವಿಧ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿತು. ಯುವಕರು, ಮಹಿಳೆಯರು, ಹಿರಿಯ ನಾಗರೀಕರು, ವೃದ್ಧರು ಸೇರಿದಂತೆ ಎಲ್ಲ ವಯೋಮಾನದವರು ಮತದಾನ ಮಾಡಲು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಎನ್‌ಡಿಎ ಮೈತ್ರಿ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ ಎನ್. ಚಂದ್ರಪ್ಪ ಹಾಗೂ ಎನ್ ಡಿ ಎ ಮೈತ್ರಿ ಗೋವಿಂದ ಕಾರಜೋಳ ಅವರು ಅಖಾಡದಲ್ಲಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ 18,56,876 ಮತದಾರರಿದ್ದು, ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸಿ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡರು.

Advertisement
Tags :
bengaluruchitradurgamorningstartedsuddionesuddione newsvotersVoting processಆರಂಭಉತ್ಸಾಹಚಿತ್ರದುರ್ಗಬೆಂಗಳೂರುಮತದಾನಮತದಾರರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article