Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕನಕ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ : ಮೀನಾಕ್ಷಿ

03:59 PM Nov 27, 2023 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 27 : ನವೆಂಬರ್ 30ರಂದು ನಗರದಲ್ಲಿ ನಡೆಯುವ ಕನಕ ಜಯಂತಿ ಕಾರ್ಯಕ್ರಮಕ್ಕೆ ಸಮಾಜದ ಎಲ್ಲಾ ಮಹಿಳೆಯರು ಸಕ್ರಿಯವಾಗಿ ಮೆರವಣಿಗೆ ಮತ್ತು ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಎಂದು ನಗರಸಭಾ ಸದಸ್ಯರು, ಕುರುಬರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾದ ಮೀನಾಕ್ಷಿ ಮನವಿ ಮಾಡಿದ್ದಾರೆ.

Advertisement

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನ.30 ರಂದು ನಗರದಲ್ಲಿ ಕನಕ ಜಯಂತಿ ಕಾರ್ಯಕ್ರಮ ನಡೆಯಲಿದೆ. ಅಂದು ಕನಕ ವೃತ್ತದಿಂದ ಮೆರವಣಿಗೆ ಪ್ರಾರಂಭವಾಗಿ ತರಾಸು ರಂಗಮಂದಿರದವರೆಗೂ ನಡೆಯಲಿದೆ, ನಂತರ ವೇದಿಕೆ ಕಾರ್ಯಕ್ರಮ ಸಮಾಜ ಭಾಂಧವರಿಗೆ ಸನ್ಮಾನ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾ ಸಚಿವರು ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಂದು ಸಮಾಜದ ಮಹಿಳೆಯರು ಹೆಚ್ಚಿನ ರೀತಿಯಲ್ಲಿ ಮೆರವಣಿಗೆ ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಇಂದಿನ ದಿನಮಾನದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿಯೂ ಸಹಾ ಹಿಂದೆ ಉಳಿದಿದ್ದಾಳೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜಿಕವಾಗಿ ಮತ್ತು ರಾಜಕೀಯವಾಗಿಯೂ ಸಹಾ ಯಾವುದೇ ಪ್ರಗತಿಯನ್ನು ಸಾಧಿಸಿಲ್ಲ, ಮಹಿಳೆಯರಿಗಾಗಿ ಸರ್ಕಾರ ವಿವಿಧ ರೀತಿಯ ಯೋಜನೆಯನ್ನು ಜಾರಿ ಮಾಡಿದೆ ಅದರ ಫಲದಿಂದ ತಾವುಗಳು ಸ್ವಾವಲಂಬಿಯಾಗಬೇಕಿದೆ ಎಂದು ಕರೆ ನೀಡಿದರು.

ನಮ್ಮ ಸಮಾಜದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಹಿಳಾ ಸಬಲೀರಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಸಮಾಜದ ನಾಯಕರು ಕೂಡ ಈ ದಿಸೆಯಲ್ಲಿಯೇ ಆಲೋಚನೆಯನ್ನು ಮಾಡಬೇಕು, ಕಟ್ಟ ಕಡೆಯ ಮಹಿಳೆಗೂ ಸಹಾ ಸರ್ಕಾರದ ಸೌಲಭ್ಯ ಸಿಗಬೇಕಿದೆ. ಎಂದು ಮೀನಾಕ್ಷಿ ತಿಳಿಸಿದರು.

ಗೋಷ್ಟಿಯಲ್ಲಿ ಸರೋಜ, ಶಾಂತ, ಶೋಭಾ, ನಾಗೇಶ್, ನಾಗಭೂಷಣ್, ಲೀಮಾವತಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement
Tags :
actively participatechitradurgaKanaka Jayanti programMeenakshiwomenಕನಕ ಜಯಂತಿ ಕಾರ್ಯಕ್ರಮಚಿತ್ರದುರ್ಗಮೀನಾಕ್ಷಿ
Advertisement
Next Article