Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ವಿಶ್ವಪರಿಸರ ದಿನಾಚರಣೆ : ಮನುಷ್ಯನ ದುರಾಸೆಯಿಂದ ಜೀವನದ ಮೇಲೆ ಪ್ರತಿಕೂಲ ಪರಿಣಾಮ : ರವೀಂದ್ರನಾಥ

01:16 PM Jun 05, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜೂ.05 :  ಮನುಷ್ಯ ಪರಿಸರದ ಒಂದು ಭಾಗ ಮನುಷ್ಯನ ದುರಾಸೆಯಿಂದ ಇಂದು ನಾವು ತಿನ್ನುವಂತಹ ಆಹಾರವು ವಿಷಪೂರಿತವಾಗಿದೆ. ಹೆಚ್ಚು ಹೆಚ್ಚು ಬೆಳೆಯನ್ನು ಬೆಳೆಯಲು ರಾಸಾಯನಿಕಯುಕ್ತ ರಸಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯುತ್ತಿದ್ದು, ಇದರಿಂದ ಮಣ್ಣಿನ ನೈಸರ್ಗಿಕ ಫಲವತ್ತತೆ ಕಡಿಮೆಯಾಗಿ ಮಣ್ಣಿನಲ್ಲಿ ರಾಸಾಯನಿಕ ಅಂಶಗಳು ಹೆಚ್ಚುತ್ತಿರುವುದರಿಂದ ಮಾನವ ಜೀವನದ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ರವೀಂದ್ರನಾಥ ಹೇಳಿದರು.

Advertisement

ನಗರದ ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ‌ ಮಾತನಾಡಿದರು.

ಆದ್ದರಿಂದ ಮಣ್ಣಿನ ನೈಸರ್ಗಿಕ ಫಲವತ್ತತೆಯನ್ನು ಕಾಪಾಡುವ ದೃಷ್ಟಿಯಿಂದ ನಮ್ಮ ರೈತರು ಹೆಚ್ಚು ಹೆಚ್ಚು ಸಾವಯವ ಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯಬೇಕು. ಪರಿಸರ ನಾಶದಿಂದ ಜಾಗತಿಕ ತಾಪಮಾನವು ಹೆಚ್ಚಳವಾಗಿದ್ದು, ಇದರಿಂದ ಅನೇಕ ಸಾವು ನೋವುಗಳು ಸಂಭವಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಮನೆಗಳ ಮುಂದೆ ಒಂದು ಗಿಡವನ್ನು ನೆಡುವುದರ ಮುಖಾಂತರ ಜಾಗತಿಕ ತಾಪಮಾನ ಕಡಿಮೆ ಮಾಡಲು ತಾವೆಲ್ಲರೂ ಕೈ ಜೋಡಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಗಿಡಮರಗಳನ್ನು ಬೆಳೆಸುವುದರಿಂದ ಪರಿಸರದಲ್ಲಿ ತಂಪು ವಾತಾವರಣ ನಿರ್ಮಾಣವಾಗುತ್ತದೆ. ವಾತಾವರಣದಲ್ಲಿನ ಕಾರ್ಬನ್ ಡೈಯಾಕ್ಸೈಡ್ ಅನ್ನು ಹೀರಿಕೊಂಡು ಗಿಡಗಳು ಉತ್ತಮವಾದ ಆಮ್ಲಜನಕವನ್ನು ಹೊರಹಾಕುತ್ತವೆ. ಇದರಿಂದ ಮನುಷ್ಯನಿಗೆ ಅನೇಕ ಶ್ವಾಸಕೋಶ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

Advertisement

ಶಾಲೆಯ ಕಾರ್ಯದರ್ಶಿಗಳಾದ ಡಾ.ಕೆ.ರಾಜೀವಲೋಚನ್ ಅವರು ಮಾತನಾಡುತ್ತಾ ಇಂದು ಮಲೆನಾಡು ತಪ್ಪಲಿನಲ್ಲಿ ಇರುವಂತಹ ಅನೇಕ ದಟ್ಟ ಅರಣ್ಯಗಳು ಇಂದು ಕಣ್ಮರೆಯಾಗುತ್ತಿರುವುದು ವಿಷಾದನೀಯ  ಸಂಗತಿ. ಮನುಷ್ಯ ತನ್ನ ಆಸೆ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಲು ಕಾಡಿನಲ್ಲಿರುವ ಅನೇಕ ಬೆಲೆಬಾಳುವಂತಹ ಮರಗಳನ್ನು ಕಡಿದು ನಾಶ ಮಾಡುತ್ತಿರುವುದರಿಂದ ಕಾಡನ್ನೇ ನಂಬಿಕೊಂಡು ಜೀವನ ಸಾಗಿಸುವ ಪ್ರಾಣಿ ಸಂಕುಲ, ಪಕ್ಷಿ ಸಂಕುಲ ಇಂದು ಅಪಾಯಕಾರಿ ಘಟ್ಟ ತಲುಪಿವೆ. ಆದ್ದರಿಂದ ‘ಕಾಡನ್ನು ಬೆಳೆಸಿ, ನಾಡನ್ನು ಉಳಿಸಿ’, ‘ಮನೆಗೊಂದು ಮರ ಊರಿಗೊಂದು ವನ’ ಎಂಬಂತೆ ನಾವೆಲ್ಲರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿಗಳಾದ ಶ್ರೀ ಹನುಮೇಶ್ ಪದಕಿ, ಶಿಕ್ಷಕವೃಂದದವರು ಹಾಗೂ ಪೋಷಕ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಪಟ್ಟ ಪರಿಸರ ಗೀತೆಯ ನೃತ್ಯ ಕಾರ್ಯಕ್ರಮ ಮನೋಮೋಹಕವಾಗಿತ್ತು.

Advertisement
Tags :
Adverse impactbengaluruchitradurgahuman greedJnanabharati VidyamandirRabindranathsuddionesuddione newsWorld Environment Dayಚಿತ್ರದುರ್ಗಜ್ಞಾನಭಾರತಿ ವಿದ್ಯಾಮಂದಿರಬೆಂಗಳೂರುಮನುಷ್ಯನ ದುರಾಸೆರವೀಂದ್ರನಾಥವಿಶ್ವಪರಿಸರ ದಿನಾಚರಣೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article