For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್ - ರೇ, ಲ್ಯಾಬ್ ಟೆಸ್ಟ್‌ ಗಳು ಉಚಿತ

05:01 PM Aug 20, 2024 IST | suddionenews
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್   ರೇ  ಲ್ಯಾಬ್ ಟೆಸ್ಟ್‌ ಗಳು ಉಚಿತ
Advertisement

ಚಿತ್ರದುರ್ಗ. ಆಗಸ್ಟ್ : 20: ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಎಕ್ಸ್ - ರೇ ಮತ್ತು ಲ್ಯಾಬ್ ಟೆಸ್ಟ್‌ಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ

Advertisement
Advertisement

ಸಂಪೂರ್ಣವಾಗಿ ಉಚಿತವಾಗಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.

ಇದೇ ತಿಂಗಳ ಸ್ವಾತಂತ್ರ್ಯ ದಿನಾಚರಣೆಯ ದಿನವಾದ  ಆಗಸ್ಟ್ 15 ರಿಂದಲೇ ಈ ಉಚಿತ ಸೇವೆಯನ್ನು ಪ್ರಾರಂಭಿಸಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವಂತಹ ಎಕ್ಸ್-ರೇ ಸೇವೆ ಜೊತೆಗೆ ವಿವಿಧ ಬಗೆಯ ಪ್ರಯೋಗಾಲಯದ ಪರೀಕ್ಷೆಗಳನ್ನು ಕೂಡ ಉಚಿತವಾಗಿ ಮಾಡಲಾಗುತ್ತಿದೆ.

Advertisement

ಸಾರ್ವಜನಿಕರು, ಆಸ್ಪತ್ರೆಗೆ ಬರುವಾಗ ತಪ್ಪದೇ ತಮ್ಮ ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ ಅನ್ನು ತಂದು ಈ ಉಚಿತ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Tags :
Advertisement