ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್....!
ಬೆಂಗಳೂರು: ಕಳೆದ ಮೂರ್ನಾಲ್ಕು ದಿನದಿಂದ ಬೆಳಗ್ಗೆಯೆಲ್ಲಾ ಬಿಸಿಲು ಇದ್ದು ರಾತ್ರಿ ವೇಳೆಗೆ ಜೋರು ಮಳೆ ಶುರುವಾಗುತ್ತಿದೆ. ಆಗಸ್ಟ್ 20 ಅಂದ್ರೆ ನಾಳೆವರೆಗೂ ಭರ್ಜರಿ ಮಳೆಯಾಗುವ ಸೂಚನೆ ನೀಡಿದೆ ಹವಮಾನ ಇಲಾಖೆ. ಅದರಲ್ಲೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಆಗಸ್ಟ್ 20ರವರೆಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇನ್ನು ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಭಾಗದಲ್ಲೂ ಉತ್ತಮ ಮಳೆಯಾಗಲಿದೆ.
ಇನ್ನು ಮಲೆನಾಡು ಭಾಗ ಹಾಗೂ ಕರಾವಳಿ ಭಾಗದಲ್ಲಿ ನಾಳೆಯಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಕರಾವಳಿ ಜಿಲ್ಲೆಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲು ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಆಗಸ್ಟ್ 21ರವರೆಗೂ ಭಾರೀ ಮಳೆಯಾಗಲಿದೆ. ಹಾಗೂ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಸಹಿತ ವ್ಯಾಪಾಕವಾದ ಮಳೆಯಾಗಲಿದೆ.
ಮಳೆ ಜೋರಾಗುವ ಕಾರಣ ಹೊರಗೆ ಬರುವ ಜನ ಎಚ್ಚರದಿಂದ ಇರಬೇಕಾಗುತ್ತದೆ. ಅದರಲ್ಲೂ ರಾತ್ರಿ ಸಮಯದಲ್ಲಿಯೇ ಹೆಚ್ಚಿನ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು ಹೊರಗೆ ಬರಬೇಕಾಗುತ್ತದೆ. ವಾಹನಗಳಲ್ಲಿ ಸಂಚಾರ ಮಾಡುವವರು ಹೆಲ್ಮೆಟೆ, ರೈನ್ ಜಾಕೆಟ್ ಗಳನ್ನು ಕ್ಯಾರಿ ಮಾಡಿದರೆ ಉತ್ತಮ.