ಜನವರಿ 10 ರಂದು ಕನ್ನಡ ಗೀತೆಗಳೊಂದಿಗೆ ಯೋಗ ತರಬೇತಿ ಕಾರ್ಯಾಗಾರ
ಸುದ್ದಿಒನ್, ಚಿತ್ರದುರ್ಗ, ಜನವರಿ.09 : ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ವಿವೇಕಾನಂದನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ಕನ್ನಡಗೀತೆಗಳೊಂದಿಗೆ ಯೋಗ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಜನವರಿ ಹತ್ತರಂದು ಬೆಳಿಗ್ಗೆ 10-30 ಗಂಟೆಗೆ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಕಾರ್ಯಕ್ರಮ ಉದ್ಘಾಟಿಸುವರು. ಸ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ಟಿ.ಷಣ್ಮುಖಪ್ಪ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ನಗರಸಭೆ ಮಾಜಿಸದಸ್ಯ ಜೆ.ಮಹೇಶ್, ಎಸ್‍ಡಿಎಂಸಿ ಅಧ್ಯಕ್ಷ ಕೆ.ಕುಮಾರ್, ಸ.ಹಿ.ಪ್ರಾ.ಶಾಲೆಯ ಸಹಶಿಕ್ಷಕರಾದ ಬಿ.ವಿಮಲಾಕ್ಷಿ, ಪಿ.ಬಿ.ಅನುಸೂಯಮ್ಮ, ಟಿ.ಎನ್.ಶೋಭ, ಬಾದರದಿನ್ನಿ ಆಟ್ರ್ಸ್ ಅಕಾಡೆಮಿಯ ಪ್ರಕಾಶ್ ಬಾದರದಿನ್ನಿ ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು.
ನೀನಾಸಂ ಪದವೀಧರ ಹಾಗೂ ಕಸಾಪ ಜಿಲ್ಲಾ ಕಾರ್ಯದರ್ಶಿ ಕೆ.ಪಿ.ಎಂ.ಗಣೇಶಯ್ಯ ಕನ್ನಡ ಗೀತಗಾಯನ ಹಾಗೂ ಯೋಗಶಿಕ್ಷಕ ಎಂ.ಬಿ.ಮುರುಳಿ ಇವರು ಯೋಗ ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸರ್ಕಾರ ನಿಗಧಿಪಡಿಸಿದ ಹುಯಿಲುಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡದ ಧ್ವನಿಮುದ್ರಿತ ಗೀತೆಗಳನ್ನು ಹಾಡುವುದರೊಂದಿಗೆ ಯೋಗ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕಿ ಎಸ್.ಕೆ.ಸುನಿತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.