For the best experience, open
https://m.suddione.com
on your mobile browser.
Advertisement

ಯುವ ಜನಾಂಗ ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್

03:00 PM Jun 11, 2024 IST | suddionenews
ಯುವ ಜನಾಂಗ ಸಾಂಸ್ಕೃತಿಕ  ಆಧ್ಯಾತ್ಮಿಕ  ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು   ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ನಾಗಭೂಷಣ್
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.11 : ನಾಗರೀಕ ಜಗತ್ತಿನಲ್ಲಿ ಒತ್ತಡದಲ್ಲಿರುವ ನಾಗರೀಕ ಸಮೂಹ, ಯುವ ಜನಾಂಗ ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.

Advertisement

ಧವಳಗಿರಿ ಬಡಾವಣೆಯಲ್ಲಿರುವ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ಹನ್ನೊಂದನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ದವಳಗಿರಿ ಬಡಾವಣೆಯ ನಾಗರೀಕರು ಸೇರಿಕೊಂಡು ಹನ್ನೊಂದು ವರ್ಷಗಳಿಂದಲೂ ಇಂತಹ ಸಾಂಸ್ಕøತಿಕ ಕಾರ್ಯಕ್ರಮ
ಆಚರಿಸಿಕೊಂಡು ಬರುತ್ತಿರುವುದನ್ನು ನೋಡಿದರೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ವಯೋಮಾನದವರು ಇಂತಹ ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸಿದರೆ ಮನಸ್ಸು ಹಗುರವಾಗಿ ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ, ಸಿ.ಜಿ.ಶ್ರೀನಿವಾಸ್, ಎಲ್.ಷಣ್ಮುಖ, ಹೊರಕೆ ರಂಗಪ್ಪ, ಈಶ್ವರಪ್ಪ, ರಾಜಣ್ಣ, ಕೆ.ಪ್ರಾಣೇಶ್, ಹಾಸ್ಯ ಸಾಹಿತಿ ಜಗನ್ನಾಥ್, ಓ.ಬಿ.ಬಸವರಾಜ್ ವೇದಿಕೆಯಲ್ಲಿದ್ದರು.

Tags :
Advertisement