For the best experience, open
https://m.suddione.com
on your mobile browser.
Advertisement

ರಾಷ್ಟ್ರಮಟ್ಟದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಗುರಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎ.ವಿ

05:38 PM Dec 23, 2023 IST | suddionenews
ರಾಷ್ಟ್ರಮಟ್ಟದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಗುರಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎ ವಿ
Advertisement

Advertisement
Advertisement

ಸುದ್ದಿಒನ್, ದಾವಣಗೆರೆ; ಡಿ.23: ದಾವಣಗೆರೆ ಬೆಣ್ಣೆ ದೋಸೆಯನ್ನು ರಾಷ್ಟ್ರಮಟ್ಟದಲ್ಲಿ ಜನಪ್ರಿಯಗೊಳಿಸಲು ಹಾಗೂ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟ ಕಾಪಾಡಿಕೊಂಡು ಬ್ರಾಂಡಿAಗ್  ಕಲ್ಪಿಸುವುದು ಈ ದೋಸೋತ್ಸವದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.
ಶನಿವಾರ ಜಿಲ್ಲಾಡಳಿತದ ವತಿಯಿಂದ  ನಗರದ ಎಂ.ಬಿ.ಎ  ಮೈದಾನ ಮತ್ತು ಗ್ಲಾಸ್ ಹೌಸ್ ಮುಂಭಾಗದಲ್ಲಿ ಆಯೋಜಿಸಲಾದ  ದೋಸೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.   ದಾವಣಗೆರೆ ಬೆಣ್ಣೆ ದೋಸೆ ಇತಿಹಾಸ ಪ್ರಸಿದ್ಧವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ದೋಸೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಇಂದಿನಿAದ ಡಿಸೆಂಬರ್ 25 ರವರೆಗೆ ದೋಸೋತ್ಸವ  ಏರ್ಪಡಿಸಲಾಗಿದೆ. ಕಳೆದ ನಾಲ್ಕು ದಶಕಗಳಿಂದ ಬೆಣ್ಣೆ ದೋಸೆ  ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರ ಮುಖಾಂತರ ಸಾರ್ವಜನಿಕರಿಗೆ ಗುಣಮಟ್ಟದ ಬೆಣ್ಣೆ ದೋಸೆಯನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಸಫಲವಾಗಿದೆ ಎಂದರು.

Advertisement

ನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯಕ್ರಮ ನಡೆಯುತ್ತಿದ್ದು ಬಂದಂತಹ ಜನರಿಗೆ ಬೆಣ್ಣೆ ದೋಸೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ.   ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದಾವಣಗೆರೆಯ ಗರಿಗರಿ ಬೆಣ್ಣೆ ದೋಸೆಯನ್ನು ಸವಿದು ಆನಂದಿಸಬಹುದಾಗಿದೆ  ಎಂದರು.

Advertisement

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ. ಸಂತೋಷ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವತ್ ಎಂ.ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶಿದ್ರಾಮ್ ಮಾರಿಹಾಳ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

Advertisement
Tags :
Advertisement