Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ಮುಂದುವರಿದ ಮಳೆ : ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ

06:55 PM Jul 27, 2023 IST | suddionenews
Advertisement

 

Advertisement

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ (ಜುಲೈ.27) ಜಿಲ್ಲೆಯಲ್ಲಿ ಜುಲೈ 26 ರಂದು ಬಿದ್ದ ಮಳೆಯ ವಿವರದನ್ವಯ 7.8 ಮಿ.ಮೀ. ಸರಾಸರಿ ಮಳೆಯಾಗಿದೆ. ಅಧಿಕ ಮಳೆಯಿಂದ ರೂ. 20.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

Advertisement

ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 4.8 ಮಿ.ಮೀ ಹಾಗೂ ವಾಸ್ತವ ಮಳೆ 6.4 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 4.9 ಮಿ.ಮೀ ಹಾಗೂ ವಾಸ್ತವ ಮಳೆ 9.0 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 1.8 ಮಿ.ಮೀ ಹಾಗೂ ವಾಸ್ತವ ಮಳೆ 11.2 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 3.1 ಮಿ.ಮೀ ಹಾಗೂ ವಾಸ್ತವ ಮಳೆ 8.5 ಮಿ.ಮೀ, ಜಗಳೂರು ವಾಡಿಕೆ ಮಳೆ 1.3 ಮಿ.ಮೀ ಹಾಗೂ ವಾಸ್ತವ ಮಳೆ 7.3 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 5.2 ಮಿ.ಮೀ ಹಾಗೂ ವಾಸ್ತವ ಮಳೆ 5.5 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 16 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 4.80 ಲಕ್ಷ ಹಾಗೂ 2 ದನದ ಕೊಟ್ಟಿಗೆ ಹಾನಿಯಾಗಿ ರೂ.20 ಸಾವಿರ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.2.00 ಲಕ್ಷ ಹಾಗೂ 4 ಮನೆ ಭಾಗಶಃ ಹಾನಿಯಾಗಿದ್ದು ರೂ. 1.20 ಲಕ್ಷ ಅಂದಾಜು ನಷ್ಟ  ಸಂಭವಿಸಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 10 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 0.65 ಸಾವಿರ ಹಾಗೂ 2 ಎಕರೆ ಬೆಳೆ ಹಾನಿಯಾಗಿ ಅಂದಾಜು ರೂ.50 ಸಾವಿರ ನಷ್ಟ, 1 ಜಾನುವಾರು ಜೀವ ಹಾನಿಯಾಗಿದ್ದು ಅಂದಾಜು ರೂ.0.35 ಸಾವಿರ ನಷ್ಟ ಸಂಭವಿಸಿದೆ.

ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.4.00 ಲಕ್ಷ ಹಾಗೂ 5 ಮನೆ ಭಾಗಶಃ ಹಾನಿಯಾಗಿದ್ದು ರೂ. 2.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.1.20 ಲಕ್ಷ ಹಾಗೂ 7 ಮನೆ ಭಾಗಶಃ ಹಾನಿಯಾಗಿದ್ದು, ರೂ. 2.80 ಲಕ್ಷ ಅಂದಾಜು ನಷ್ಟ, 1 ಜಾನುವಾರು ಜೀವ ಹಾನಿಯಾಗಿದ್ದು ಅಂದಾಜು ರೂ.0.40 ಸಾವಿರ ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ20.70 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
chitradurgadavanagereDistrictfeaturedIncessantlast 24 hoursMore rainRainRain Reportsuddioneಚಿತ್ರದುರ್ಗತಾಲ್ಲೂಕುವಾರುದಾವಣಗೆರೆಮಳೆವರದಿಸುದ್ದಿಒನ್ಹೆಚ್ಚು ಮಳೆ
Advertisement
Next Article