ಜುಲೈ 3 ರಿಂದ ಮೊದಲ ಬಜೆಟ್ ಅಧಿವೇಶನ ಆರಂಭ..!
ದಾವಣಗೆರೆ: ನೂತನ ಕಾಂಗ್ರೆಸ್ ಸರ್ಕಾರ ಸದ್ಯ ತಮ್ಮ ಗ್ಯಾರಂಟಿಗಳಿಗೊಂದು ಮುದ್ರೆ ಒತ್ತಿ, ಈಗ ಬಜೆಟ್ ಕಡೆಗೆ ಗಮನ ಹರಿಸಿದೆ. ತಮ್ಮ ಮೊದಲ ಬಜೆಟ್ ಅಧಿವೇಶನವನ್ನು ಜುಲೈ 3ರಿಂದ ಆರಂಭ ಮಾಡಲಿದೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ. ಬಜೆಟ್ ಅಧಿವೇಶನವೂ ಜುಲೈ 7ರಂದು ಆರಂಭವಾಗಲಿದೆ. ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನು ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.
ರೈತರಿಗೆ ಬಿತ್ತನೆ ಬೀಜ, ಕೀಟನಾಶಕಗಳ ಪೂರೈಕೆಯಲ್ಲಿ ಲೋಪವಾಗುದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದಾರೆ.