For the best experience, open
https://m.suddione.com
on your mobile browser.
Advertisement

ಟೊಮ್ಯಾಟೊ ಹಣ್ಣು ಆರೋಗ್ಯಕ್ಕೆ ಎಷ್ಟೊಂದು ಉಪಯೋಗ ಗೊತ್ತಾ ?

06:59 AM Jun 10, 2024 IST | suddionenews
ಟೊಮ್ಯಾಟೊ ಹಣ್ಣು ಆರೋಗ್ಯಕ್ಕೆ ಎಷ್ಟೊಂದು ಉಪಯೋಗ ಗೊತ್ತಾ
Advertisement

Advertisement

ಸುದ್ದಿಒನ್ :  ಪ್ರಸ್ತುತ ದಿನಗಳಲ್ಲಿ ಅನೇಕ ಜನರು ರಕ್ತದೊತ್ತಡ (ಕಡಿಮೆ ರಕ್ತದೊತ್ತಡ, ಅಧಿಕ ರಕ್ತದೊತ್ತಡ) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಹೃದ್ರೋಗಕ್ಕೆ ಮುಖ್ಯ ಕಾರಣ ಅಧಿಕ ರಕ್ತದೊತ್ತಡ.

Advertisement

ವಾಸ್ತವವಾಗಿ ಅಧಿಕ ಸೋಡಿಯಂ ಸೇವನೆಯಿಂದ ಅಧಿಕ ರಕ್ತದೊತ್ತಡ ಸಮಸ್ಯೆ ಬರುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡದಿಂದ ಪಾರಾಗಬಹುದು.  ಟೊಮ್ಯಾಟೊ ಹಣ್ಣಿನಲ್ಲಿ ಪೊಟ್ಯಾಸಿಯಂ ಸಮೃದ್ಧವಾಗಿದೆ. ಇದು ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಲೈಕೋಪೀನ್ ಹೃದಯದ ಆರೋಗ್ಯಕ್ಕೆ ಸಹ ಪ್ರಯೋಜನವನ್ನು ನೀಡುತ್ತದೆ.

Advertisement

ಟೊಮ್ಯಾಟೊ ಎಲ್ಲರ ಅಡುಗೆಮನೆಯಲ್ಲಿ ಬಳದುವ ಸಾಮಾನ್ಯ ತರಕಾರಿ. ಇದು ಕೆಂಪು ಮತ್ತು ಹಳದಿ ಬಣ್ಣದಿಂದ ಕೂಡಿರುತ್ತದೆ. ಟೊಮೆಟೊದಲ್ಲಿ ಹಲವು ಆರೋಗ್ಯಕಾರಿ ಲಾಭಗಳು ಅಡಗಿವೆ. ಟೊಮೆಟೊದಲ್ಲಿ ವಿಟಮಿನ್‌ಗಳು, ಪೋಷಕಾಂಶಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ಫೋಲೇಟ್, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೂ ಟೊಮೆಟೊ ವರದಾನ.  ಮಾರಣಾಂತಿಕ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುವುದಲ್ಲದೆ ಚರ್ಮಕ್ಕೆ ಆರೋಗ್ಯವನ್ನೂ ನೀಡುತ್ತದೆ.

Advertisement
Advertisement

ಕ್ಯಾನ್ಸರ್ ತಡೆಗಟ್ಟುತ್ತದೆ

ನಾವು ಟೊಮ್ಯಾಟೊವನ್ನು ನಮ್ಮ ಆಹಾರದಲ್ಲಿ ಬಳಸುವುದರಿಂದ, ಆಹಾರವು ಉತ್ತಮ ರುಚಿಯಾಗಿರುವುದಲ್ಲದೆ ಇದು ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಟೊಮ್ಯಾಟೊ ಸೇವನೆಯಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಕ್ಯಾಪ್ಸಿನೋಜೆನಿಕ್ ವಿರೋಧಿ ಗುಣಗಳನ್ನು ಹೊಂದಿದೆ. ಇದು ಹೊಟ್ಟೆ ಮತ್ತು ಯಕೃತ್ತಿನ ಕ್ಯಾನ್ಸರ್ ಅನ್ನು ತಡೆಯುತ್ತದೆ.

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಟೊಮ್ಯಾಟೊ ಆರೋಗ್ಯಕರ ಖನಿಜಗಳನ್ನು ಹೊಂದಿರುತ್ತದೆ. ಫೈಬರ್, ಕೋಲಿನ್, ವಿಟಮಿನ್ ಸಿ, ಪೊಟ್ಯಾಸಿಯಮ್ ಇವುಗಳಿಂದ ಹೃದಯ ಅರೋಗ್ಯಕ್ಕೆ ಒಳ್ಳೆಯದು. ಲೈಕೋಪೀನ್ ನಮ್ಮ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಅಲ್ಲದೆ ಬಿಪಿಯನ್ನು ನಿಯಂತ್ರಿಸುತ್ತದೆ.

ಚರ್ಮದ ಆರೋಗ್ಯಕ್ಕಾಗಿ

ತ್ವಚೆಯ ಆರೋಗ್ಯಕ್ಕಾಗಿ ಟೊಮ್ಯಾಟೊ ಆಹಾರದಲ್ಲಿ ಸೇವಿಸಬೇಕು. ಇದರಿಂದ ಮುಖ ಕಾಂತಿಯುತವಾಗುತ್ತದೆ. ಇದಲ್ಲದೇ ಟೊಮ್ಯಾಟೊ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಕಾಂತಿಯುತವಾಗುತ್ತದೆ. ಮುಖದ ಮೇಲಿನ ಮೊಡವೆಗಳನ್ನು ಹೋಗಲಾಡಿಸುತ್ತದೆ. ಮುಖದ ಮೇಲಿನ ವಚನ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಕಡಿಮೆ ಮಾಡಲು ಸಹ ಪರಿಣಾಮಕಾರಿಯಾಗಿದೆ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

Advertisement
Tags :
Advertisement