ಪ್ರತಿದಿನ ಒಂದು ಲೋಟ ಈ ಜ್ಯೂಸ್ ಕುಡಿಯಿರಿ : ಫಲಿತಾಂಶ ನೀವೇ ಗಮನಿಸಿ...!
ಸುದ್ದಿಒನ್ : ಹಾಗಲಕಾಯಿಯನ್ನು ಅನೇಕ ಜನರು ಇಷ್ಟಪಡುವುದಿಲ್ಲ. ಆದರೆ ಈ ಹಾಗಲಕಾಯಿಯಲ್ಲಿ ಹಲವು ಔಷಧೀಯ ಗುಣಗಳಿವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು. ಹಾಗಲಕಾಯಿಯ ರಸವು (ಜ್ಯೂಸ್) ಅನೇಕ ಪೋಷಕಾಂಶಗಳಿಂದ ಕೂಡಿದ ಆರೋಗ್ಯಕರ ಪಾನೀಯ ಎಂದು ಹೇಳಲಾಗುತ್ತದೆ. ಹಾಗಲಕಾಯಿ ರಸದ ಔಷಧೀಯ ಗುಣಗಳು ಇನ್ಸುಲಿನ್ ನಂತೆ ಕೆಲಸ ಮಾಡುತ್ತದೆ. ಹೀಗಾಗಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.
ಹಾಗಲಕಾಯಿ ರಸವನ್ನು ಪ್ರತಿದಿನ ಮುಂಜಾನೆಯೇ ಕುಡಿಯುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ದೃಷ್ಟಿ ಸುಧಾರಿಸಲು ಮತ್ತು ಕಣ್ಣಿನ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಹಾಗಲಕಾಯಿಯ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ಹೆಚ್ಚಾದ ಕೊಬ್ಬನ್ನು ತಕ್ಷಣ ಕರಗಿಸುತ್ತದೆ. ಇದರಿಂದ ತೂಕ ಕಡಿಮೆಯಾಗುತ್ತದೆ. ಜೀರ್ಣಕ್ರಿಯೆಯ ಕಾರ್ಯವನ್ನು ಸುಧಾರಿಸುತ್ತದೆ. ಹೊಟ್ಟೆ ಮತ್ತು ಕರುಳುಗಳು ಶುದ್ಧವಾಗುತ್ತವೆ.
ಹಾಗಲಕಾಯಿಯಲ್ಲಿ ಸಮೃದ್ಧವಾದ ನಾರಿನಂಶ (ಫೈಬರ್) ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಯಾವುದೇ ರೀತಿಯ ಗ್ಯಾಸ್, ಅಸಿಡಿಟಿ ಇಲ್ಲ, ಅಜೀರ್ಣದಂತಹ ಸಮಸ್ಯೆಗಳು ಉಂಟಾಗುವುದಿಲ್ಲ. ಇದರಲ್ಲಿರುವ ಔಷಧೀಯ ಗುಣಗಳು ದೇಹದಲ್ಲಿರುವ ವಿಷ ಮತ್ತು ತ್ಯಾಜ್ಯವನ್ನು ಹೊರಹಾಕಿ ದೇಹವನ್ನು ಶುದ್ಧಗೊಳಿಸುತ್ತದೆ. ಇದು ಚರ್ಮವನ್ನು ಕಾಂತಿಯುತವಾಗಿ ಮತ್ತು ಮೃದುವಾಗಿಸುತ್ತದೆ. ಇದು ಮೊಡವೆ ಮತ್ತು ಸುಕ್ಕುಗಳನ್ನು ತಡೆಯಲು ಸಹಾಯ ಮಾಡುತ್ತದೆ.
ಪ್ರತಿದಿನ ಕರಿಬೇವಿನ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಹೃದಯದ ತೊಂದರೆಗಳನ್ನು ನಿವಾರಿಸುತ್ತದೆ. ಹಾಗಲಕಾಯಿಯ ಜ್ಯೂಸ್ ಅನ್ನು ಪ್ರತಿದಿನ ಸೇವಿಸಿದರೆ, ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಸೋಂಕುಗಳನ್ನು ತಡೆಯುತ್ತದೆ. ಅಧಿಕ ರಕ್ತದೊತ್ತಡ ಮತ್ತು ಅಲರ್ಜಿಯನ್ನು ದೂರಮಾಡುತ್ತದೆ.
(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)