Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

Pomegranate : ದಿನಕ್ಕೆ ಒಂದು ಲೋಟ ಕುಡಿದರೆ ಸಾಕು, ಹೃದಯ ಸಮಸ್ಯೆಗಳಿಗೆ ಇದು ದಿವ್ಯ ಔಷಧ....!

05:34 AM Apr 11, 2024 IST | suddionenews
Advertisement

ಸುದ್ದಿಒನ್ : ಫೈಬರ್, ವಿಟಮಿನ್ ಮತ್ತು ಖನಿಜಗಳಿಂದ ತುಂಬಿದ ದಾಳಿಂಬೆ ದೇಹಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇದು ದೇಹದ ಜೀವಕೋಶಗಳನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದೀರ್ಘಕಾಲದ ಉರಿಯೂತವನ್ನು ಕಡಿಮೆ ಮಾಡಲು, ಟೈಪ್ -2 ಮಧುಮೇಹದಂತಹ ರೋಗಗಳನ್ನು ತಡೆಗಟ್ಟುವಲ್ಲಿ ಇದು ಪರಿಣಾಮಕಾರಿಯಾಗಿದೆ. ದಾಳಿಂಬೆಯ ಕೆಲವು ಭಾಗಗಳು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅಧ್ಯಯನಗಳು  ತಿಳಿಸಿವೆ.

Advertisement

ದಾಳಿಂಬೆ ಪಾಲಿಫಿನಾಲಿಕ್ ಎಂಬ ಪ್ರಯೋಜನಕಾರಿ ಸಂಯುಕ್ತವನ್ನು ಹೊಂದಿರುತ್ತದೆ. ಈ ಹಣ್ಣು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ಎದೆನೋವಿನ ತೀವ್ರತೆಯನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ತಜ್ಞರು.

ದಾಳಿಂಬೆ ರಸವು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ. ಹಾಗಾಗಿ ನಿತ್ಯವೂ ಈ ಜ್ಯೂಸ್ ಕುಡಿದರೆ ಕಿಡ್ನಿಗೆ ಒಳ್ಳೆಯದು ಎಂದು ತಜ್ಞರು ಸಲಹೆ ನೀಡುತ್ತಾರೆ. ದಾಳಿಂಬೆ ರಸವು ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡುತ್ತದೆ. ಬಾಯಿಯಲ್ಲಿ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುವ ಮೂಲಕ ದಂತಕ್ಷಯವನ್ನು ತಡೆಯುತ್ತದೆ.

Advertisement

ದಾಳಿಂಬೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಕರುಳಿನಲ್ಲಿ ಪ್ರಯೋಜನಕಾರಿ ಬ್ಯಾಕ್ಟೀರಿಯಾಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ. ಪರಿಣಾಮವಾಗಿ ಅಸಿಡಿಟಿ - ಎದೆಯುರಿ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.

ದಾಳಿಂಬೆಯಲ್ಲಿರುವ ಎಲಾಜಿಟಾನಿನ್ ಎಂಬ ಆ್ಯಂಟಿಆಕ್ಸಿಡೆಂಟ್ ಆಲ್ಝೈಮರ್ ಮತ್ತು ಪಾರ್ಕಿನ್ಸನ್ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

Advertisement
Tags :
bengaluruchitradurgadivine medicinehealth tipsheartPomegranatepomegranate juiceproblemssuddionesuddione newsಉಪಯುಕ್ತ ಆರೋಗ್ಯ ಮಾಹಿತಿಚಿತ್ರದುರ್ಗಜ್ಯೂಸ್ದಾಳಿಂಬೆದಿವ್ಯ ಔಷಧಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹೃದಯ ಸಮಸ್ಯೆಗಳು
Advertisement
Next Article