85% ಡೀಲ್ ಫಿಕ್ಸಿಂಗ್ ಸಭೆಯೇ..? : #AnswerMaadiSiddu ಅಂತಿದೆ ಬಿಜೆಪಿ..!
ಬೆಂಗಳೂರು : ಸದ್ಯ ರಾಜ್ಯದಲ್ಲಿ ಆಡಳಿತ ಪಕ್ಷದಲ್ಲಿ ಕಾಂಗ್ರೆಸ್ ಕುಳಿತಿದೆ. ವಿರೋಧ ಪಕ್ಷದಲ್ಲಿ ಬಿಜೆಪಿ ಕುಳಿತಿದೆ. ಆಡಳಿತ ಪಕ್ಷದ ಸಣ್ಣ ತಪ್ಪು ಕಂಡರು ಅದನ್ನು ವಿರೋಧ ಪಕ್ಷವಾದ ಬಿಜೆಪಿ ಕೇಳಲೇಬೇಕಿದೆ. ಇದೀಗ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯ ಒಂದು ಫೋಟೋ ಇಟ್ಟುಕೊಂಡು ಕಮಿಷನ್ ವಿಚಾರವಾಗಿ ಬಿಜೆಪಿ ಪ್ರಶ್ನೆ ಮಾಡಿದೆ.
ಬಿಬಿಎಂಪಿ ಚುನಾವಣೆ ಯಾವಾಗಲೋ ನಡೆಯಬೇಕಿತ್ತು. ಆದರೆ ಇನ್ನು ನಡೆದಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಈ ಬಾರಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎನ್ನಲಾಗ್ತಿದೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಸಚಿವರ ಜೊತೆಗೆ ಇಂದು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಅದರಲ್ಲಿರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಕೂಡ ಭಾಗಿಯಾಗಿದ್ದಾರೆ. ಈ ಫೋಟೋವನ್ನಿಟ್ಟುಕೊಂಡು ಇದೀಗ ಬಿಜೆಪಿ ಟ್ವೀಟ್ ಮಾಡಿದೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು...? ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..?
ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..? ಉತ್ತರಿಸಿ ಮಾನ್ಯ @siddaramaiah, @DKShivakumar ಅವರೇ...#AnswerMaadiSiddu ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರಶ್ನಿಸಿದ್ದಾರೆ.