Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಫೆಬ್ರವರಿ 23 ರಿಂದ 25 ರವರೆಗೆ ಕುಂದೂರಿನಲ್ಲಿ ಅಂಭಾದೇವಿ ರಥೋತ್ಸವ

09:38 PM Feb 12, 2024 IST | suddionenews
Advertisement

ಸುದ್ದಿಒನ್, ಹೊಸದುರ್ಗ, ಫೆಬ್ರವರಿ.12 :  ತಾಲ್ಲೂಕಿನ ಬಾಗೂರು ಸಮೀಪದ ಕುಂದೂರು ಗೊಲ್ಲರಹಟ್ಟಿಯ ಗೋವರ್ಧನಗಿರಿ ಜಗದಾಂಬ ಮಹಾಸಂಸ್ಥಾನ ಮಠದಲ್ಲಿ  ಫೆಬ್ರವರಿ 23ರಿಂದ 25ರವರೆಗೆ 11ನೇ ವರ್ಷದ ದಕ್ಷಿಣಮ್ನಾಯ ಕ್ಷೇತ್ರದ ಅಂಭಾದೇವಿ ಮತ್ತು ತಿರುಪತಿ ವೆಂಕಟೇಶ್ವರ ಬ್ರಹ್ಮರಥೋತ್ಸವ ಜರುಗಲಿದೆ.

Advertisement

ಫೆಬ್ರವರಿ 23ರಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ಹಾಗೂ ಸಂಜೆ 7ಕ್ಕೆ ಅಂಭಾದೇವಿ ಮತ್ತು ತಿರುಮಲ ಸ್ವಾಮಿಗೆ ಕಂಕಣಧಾರಣೆ ಜರುಗಲಿದೆ.

ಫೆಬ್ರವರಿ 24ರಂದು ಬೆಳಿಗ್ಗೆ 10.30ಕ್ಕೆ ಮಹಾಸಂಸ್ಥಾನ ಮಠದ ತಿಮ್ಮಪ್ಪ ಸ್ವಾಮೀಜಿಯಿಂದ ಗೋವರ್ಧನಗಿರಿ ಸಿಂಹಾಸನ ಪೀಠಾರೋಹಣ ನಡೆಯಲಿದ್ದು, ಅದೇ ದಿನ ಸಂಜೆ 5ಗಂಟೆಗೆ ದೇವಿಯ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ನಂತರ  ಗೋವರ್ಧನಗಿರಿ ಧರ್ಮದ ಬಾವುಟ ಹರಾಜು ಹಾಕಲಾಗುವುದು.

Advertisement

ಫೆಬ್ರವರಿ 25ರಂದು ಸಂಜೆ 4.30ಕ್ಕೆ ಕುಂಭೋತ್ಸವ ಆಚರಣೆಯೊಂದಿಗೆ ಜಾತ್ರೆ ಕೊನೆಗೊಳ್ಳಲಿದೆ. ಆಗಮಿಸುವ ಭಕ್ತರಿಗೆ ಮೂರು ದಿನವೂ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಅಂಭಾದೇವಿಯ ದೇವಸ್ಥಾನ ಕಟ್ಟಡ ಕಾರ್ಯ ಆರಂಭವಾಗಿದ್ದು, ಸರ್ವ ಭಕ್ತರು ಕಟ್ಟಡ ನಿರ್ಮಾಣಕ್ಕೆ ತನು ಮನ ಧನ ಸಹಾಯದೊಂದಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥಾನ ಮಠದ ಪ್ರಕಟಣೆ ತಿಳಿಸಿದೆ.

Advertisement
Tags :
AmbhadevichitradurgafebruaryhosadurgaKundurrathotsavasuddionesuddione newsಅಂಭಾದೇವಿಕುಂದೂರುಚಿತ್ರದುರ್ಗಫೆಬ್ರವರಿರಥೋತ್ಸವಸುದ್ದಿಒನ್ಸುದ್ದಿಒನ್ ನ್ಯೂಸ್ಹೊಸದುರ್ಗ
Advertisement
Next Article