Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಶೋಷಿತ ಹಾಗೂ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದಿಂದ ಪಂಜಿನ ಮೆರವಣಿಗೆ

08:59 PM Aug 26, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವತಿಯಿಂದ ಸೋಮವಾರ ನಗರದಲ್ಲಿ ರಾಜ್ಯಪಾಲರ ಹಠಾವೂ ಅಂಗವಾಗಿ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು.

Advertisement

ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸಂತೇಪೇಟೆ, ಬಿ.ಡಿ.ರಸ್ತೆ, ಎಸ್.ಬಿ.ಎಂ, ವೃತ್ತ, ಮಹಾವೀರ ವೃತ್ತದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್‍ರವರಿಗೆ ಮಾಲಾರ್ಪಣೆ ಮಾಡು ವುದರ ಮೂಲಕ ಸಮಾಪ್ತಿ ಮಾಡಲಾಯಿತು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವತಿಯಿಂದ ಪದಾಧಿಕಾರಿಗಳು, ಕಾರ್ಯಕರ್ತರು ದಾರಿಯುದ್ದಕ್ಕೂ ಸಿದ್ದರಾಮಯ್ಯರವರ ಪರವಾಗಿ ಹಾಗೂ ರಾಜ್ಯಪಾಲರ ಮತ್ತು ಬಿಜೆಪಿ ಪಕ್ಷದ ವಿರುದ್ದವಾಗಿ ಘೋಷಣೆಗಳನ್ನು ಕೂಗಲಾಯಿತು. ನಗರದ ಸಂತೇಪೇಟೆ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಾಣ ಮಾಡುವುದರ ಮೂಲಕ ಸಿದ್ದರಾಮಯ್ಯ ರವರ ಪರವಾಗಿ ನಾವು ಇದ್ದೇವೆ ಎಂಬ ಸಂದೇಶವನ್ನು ಸಾರಲಾಯಿತು. ರಾಜ್ಯಪಾಲರನ್ನು ರಾಜ್ಯದಿಂದ ವಾಪಾಸ್ಸು ಕರೆಸುವಂತೆ ರಾಷ್ಟ್ರಪತಿಗಳನ್ನು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಹಿಂದ ಮುಖಂಡ ಬಿ.ಟಿ.ಜಗದೀಶ್ ಸಿದ್ದರಾಮಯ್ಯರವರ ಪರವಾಗಿ ರಾಜ್ಯ ಹಿಂದುಳಿದ, ಅಲ್ಪ ಸಂಖ್ಯಾತ, ಪರಿಶಿಷ್ಟ ಜಾತಿ ಪಂಗಡ ಸೇರಿದಂತೆ ಇತರರು ಸಹಾ ಬೆಂಬಲವಾಗಿದ್ದಾರೆ ಸಿದ್ದರಾಮಯ್ಯ ಹೆದರುವ ಅವಶ್ಯಕತೆ ಇಲ್ಲ ಎಂದು ಸಿದ್ದರಾಮಯ್ಯರವರಿಗೆ ಮನವರಿಕೆ ಮಾಡಿ, ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಮೇಲೆ ಪ್ರಾಸಿಕ್ಯೊಷ್‍ನ್ನಿಗೆ ಅನುಮತಿ ನೀಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೋರಿದ್ದಾರೆ. ರಾಜಭವನವನ್ನು ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್, ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ದೂರಿದರು.

ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ರಾಜ್ಯದಲ್ಲಿ ಅಧಿಕಾರವನ್ನು ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯಪಾಲರ ಮೂಲಕ ವಿನಾಕಾರಣ ಕಿರುಕುಳÀವನ್ನು ನೀಡುತ್ತಿದ್ದಾರೆ. ರಾಜ್ಯಪಾಲರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿದ್ದಾರೆ. ಸಿದ್ದರಾಮಯ್ಯ ರವರು ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅವರ ಮೇಲೆ ಇಲ್ಲದ ಸಲ್ಲದೆ ಆರೋಪವನ್ನು ಹೊರೆಸಿ ಅವರ ಜನಪ್ರಿಯತೆಯನ್ನು ಕುಗ್ಗಿಸುವ ಕಾರ್ಯವನ್ನು ಮಾಡಿದರು ಇದಕ್ಕೆ ಬಗ್ಗದ ಸಿದ್ದರಾಮಯ್ಯರವರ ವಿರುದ್ದ ಎಂದೋ ನಡೆದ ಮುಡಾ ಹಗರಣವನ್ನು ಬಯಲಿಗೆ ತಂದು ಅವರನ್ನು ತೋಜೋವಧೆ ಮಾಡುವ ಕಾರ್ಯವನ್ನು ಮಾಡಿದರು. ಇದರು ಸಫಲವಾಗದಿದ್ದಾಗ ಕೇಂದ್ರದಿಂದ ರಾಜ್ಯಪಾಲರ ಮೂಲಕ ಸಿದ್ದರಾಮಯ್ಯ ರವರಿಗೆ ನೋಟಿಸ್ ನೀಡುವ ಕಾರ್ಯವನ್ನು ಮಾಡಿ ಅವರನ್ನು ಕಾನೂನಿನಲ್ಲಿ ಸಿಕ್ಕಿ ಹಾಕಿಸುವ ಕಾರ್ಯವನ್ನು ಮಾಡಿದ್ದಾರೆ ಇದು ಖಂಡನೀಯವಾದದು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ, ದಸಂಸಯ ಮುಖಂಡರಾದ ದುರುಗೇಶ್, ನಗರಾಭೀವೃಧ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಆರ್.ಕೆ.ಸರ್ದಾರ, ವಿಶ್ವಕರ್ಮ ಸಮಾಜದ ಪ್ರಸನ್ನ ಕುಮಾರ್, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ನಗರಸಭಾದ ಮಾಜಿ ಸದಸ್ಯರಾದ ಮಲ್ಲಿಕಾರ್ಜನ್, ನಿಶಾನಿ ಶಂಕರ್, ರಘು. ಮಾಲೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

Advertisement
Tags :
Backward CastesbengaluruchitradurgaCM SiddaramaiahFlag marchsuddionesuddione newssupportಚಿತ್ರದುರ್ಗಪಂಜಿನ ಮೆರವಣಿಗೆಬೆಂಗಳೂರುಶೋಷಿತ ಹಾಗೂ ಹಿಂದುಳಿದ ಜಾತಿಗಳ ಮಹಾ ಒಕ್ಕೂಟಸಿಎಂ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article