For the best experience, open
https://m.suddione.com
on your mobile browser.
Advertisement

ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ : ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

08:33 PM Aug 26, 2024 IST | suddionenews
ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ   ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ
Advertisement

ಬೆಳಗಾವಿ ಆ 26 : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು.

Advertisement
Advertisement

ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.

ಕೈ ಮೇಲಾಗ್ಲಿ-ದೇಶ ಆಳು ದೊರೆಯೇ :
ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು.

Advertisement

ಅಕ್ಕಾತಾಯಿ ಜೊತೆ ಬಂದಿದ್ದ ಇತರೆ ತಾಯಂದಿರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು.

Advertisement

ನಿಮ್ಮ ಆಶೀರ್ವಾದ ಹೀಗೇ ಇರಲಿ :
ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ತಾಯಂದಿರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.

Tags :
Advertisement