For the best experience, open
https://m.suddione.com
on your mobile browser.
Advertisement

ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ ವಿಳಂಬ : ಸೆಪ್ಟೆಂಬರ್ 30 ರಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರ ಪ್ರತಿಭಟನೆ

03:47 PM Sep 27, 2023 IST | suddionenews
ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪ್ರಕಟ ವಿಳಂಬ   ಸೆಪ್ಟೆಂಬರ್ 30 ರಂದು ನಗರಸಭೆ  ಪುರಸಭೆ  ಪಟ್ಟಣ ಪಂಚಾಯಿತಿ ಸದಸ್ಯರ ಪ್ರತಿಭಟನೆ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.27 : ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಸೆಪ್ಟೆಂಬರ್ 30 ರಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಕುರಿತು ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರುಗಳ ಒಕ್ಕೂಟದಿಂದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಮುಗಿದು ಮೂವತ್ತು ತಿಂಗಳು ಕಳೆದಿದ್ದರೂ ಇನ್ನು ಮೀಸಲಾತಿಯನ್ನು ಪ್ರಕಟಿಸದೆ ಸರ್ಕಾರ ಸದಸ್ಯರುಗಳ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದರಿಂದ ಯಾವುದೇ ಸಭೆಗಳು ನಡೆಯುತ್ತಿಲ್ಲ. ಮೂಲಭೂತ ಸೌಕರ್ಯಗಳಿಂದ ಸಾರ್ವಜನಿಕರು ವಂಚನೆಗೊಳಗಾಗುತ್ತಿದ್ದಾರೆ. ಕುಂದುಕೊರತೆ ಮತ್ತು ಸಮಸ್ಯೆಗಳನ್ನು ಆಲಿಸಲು ಆಗುತ್ತಿಲ್ಲ. ಸದಸ್ಯರುಗಳ ಅಧಿಕಾರವನ್ನು ಮೊಟಕುಗೊಳಿಸುವ ಅಧಿಕಾರಿಗಳ ಕುತಂತ್ರವನ್ನು ಖಂಡಿಸಿ 30 ರಂದು ಬೆಳಿಗ್ಗೆ 11 ಗಂಟೆಗೆ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಡಲಾಗುವುದು. ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಭೆಯಲ್ಲಿ ವಿನಂತಿಸಲಾಯಿತು.

ಚಿತ್ರದುರ್ಗ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಸುರೇಶ್, ಸದಸ್ಯರುಗಳಾದ ನಸ್ರುಲ್ಲಾ, ಶ್ರೀನಿವಾಸ್, ದಾವೂದ್, ಹರೀಶ್, ಜಯಣ್ಣ, ಶಶಿ, ವೆಂಕಟೇಶ್, ಭಾಗ್ಯಮ್ಮ, ತಾರಕೇಶ್ವರಿ, ಮಾಜಿ ಸದಸ್ಯ ಟಿ.ರಮೇಶ್, ಹೊಳಲ್ಕೆರೆ ಪಟ್ಟಣ ಪಂಚಾಯಿತಿಯ ಕೆ.ಸಿ. ರಮೇಶ್, ಜಮೀಲ್, ಜಯಸಿಂಹ, ಹೊಸದುರ್ಗದ ಶ್ರೀನಿವಾಸ್, ದೊಡ್ಡಯ್ಯ, ಹಿರಿಯೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಜ್ಜಪ್ಪ, ಸಾದತ್‍ವುಲ್ಲಾ ಇನ್ನು ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

Tags :
Advertisement