Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹೊಸ ಸಂಘಟನೆ ಕಟ್ಟಲು ಈಶ್ವರಪ್ಪ ನಿರ್ಧಾರ : ಎಲ್ಲಿ, ಯಾವಾಗ, ಅಧಿಕೃತವಾಗಿ ಘೋಷಿಸುತ್ತಾರೆ ಗೊತ್ತಾ..?

04:12 PM Oct 07, 2024 IST | suddionenews
Advertisement

 

Advertisement

ಹುಬ್ಬಳ್ಳಿ: ಕೆ.ಎಸ್ ಈಶ್ವರಪ್ಪ ಅವರು ಬಿಜೆಪಿ ಪಕ್ಷದಿಂದ ಹೊರ ಬಂದು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಬಳಿಕ ಹಲವು ಬೆಳವಣಿಗೆಯ ನಂತರ ಮತ್ತೆ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ಮಾತಿತ್ತು. ಇದೀಗ ಹೊಸದಾಗಿ ಸಂಘಟನೆ ಕಟ್ಟುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಈಶ್ವರಪ್ಪ ಅವರೇ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಸಂಘಟನೆ ಬೇಕಾಗಿದೆ. ಹೀಗಾಗಿ ಸಾಧು-ಸಂತರ ಸೂಚನೆಯಂತೆ ಒಂದು ಸಂಘಟನೆ ಕಟ್ಟಲು ತೀರ್ಮಾನ ಮಾಡಿದ್ದೇವೆ. ಈ ಸಂಘಟನೆಗೆ ಸಾಧು-ಸಂತರು ಬೆಂಬಲ ಕೊಡುತ್ತೇವೆ ಎಂದಿದ್ದಾರೆ. ಸಂಘಟನೆ ರಚನೆಯ ಅಂತಿಮ ನಿರ್ಣಯವನ್ನು ಬಾಗಲಕೋಟೆಯಲ್ಲಿ ಕೈಗೊಳ್ಳುತ್ತೇವೆ. ಹುಬ್ಬಳ್ಳಿಯಲ್ಲಿ ಎಲ್ಲಾ ಜಾತಿಯವರನ್ನು ಸೇರಿಸಿ, ಮೊದಲ ಸಭೆ ಮಾಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷದವರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ. ಸಾಧು-ಸಂತರು ಕೂಡ ಸಲಹೆಯನ್ನು ನೀಡಿದ್ದಾರೆ. ಅವರ ಸಲಹೆಗೆ ನಾವೂ ಒಪ್ಪಿದ್ದೇವೆ.

Advertisement

ಅಕ್ಟೋಬರ್ 20ರಂದು ಬಾಗಲಕೋಟೆ ಚರಂತಿ ಮಠದ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 30-40 ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ. ಬಾಗಲಕೋಟೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಸಮಾಜದಲ್ಲಿ ಎಲ್ಲರಿಗೂ ಅನ್ಯಾಯವಾಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಈ ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪಸಂಖ್ಯಾತರ ವಿರುದ್ಧ ಅಲ್ಲ ಆದರೆ ರಾಷ್ಟ್ರದ್ರೋಹಿ ಮುಸ್ಲಿಂರ ವಿರುದ್ಧವಾಗಿರುತ್ತದೆ ಎಂದಿದ್ದಾರೆ.

Advertisement
Tags :
announcedbengaluruchitradurgaeshwarappaofficiallyorganizationsuddionesuddione newsಅಧಿಕೃತಈಶ್ವರಪ್ಪಕೆ ಎಸ್ ಈಶ್ವರಪ್ಪಘೋಷಣೆಚಿತ್ರದುರ್ಗನಿರ್ಧಾರಬೆಂಗಳೂರುಸಂಘಟನೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article