For the best experience, open
https://m.suddione.com
on your mobile browser.
Advertisement

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಲಲಿತಮ್ಮ ನಿಧನ

07:19 PM Jul 13, 2023 IST | suddionenews
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ  ಶ್ರೀಮತಿ ಲಲಿತಮ್ಮ ನಿಧನ
Advertisement

ವರದಿ ಮತ್ತು ಫೋಟೋ ಕೃಪೆ                        ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement
Advertisement

ಚಿತ್ರದುರ್ಗ, (ಜು.13) : ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರ ಸಹೋದರ ಎಂ.ಶ್ರೀನಿವಾಸ್‍ರವರ ಪತ್ನಿ ಶ್ರೀಮತಿ ಲಲಿತಮ್ಮ(60) ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ನಿಧನರಾದರು.

Advertisement

ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಮ್ಮ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಚಳ್ಳಕೆರೆ ತಾಲ್ಲೂಕು ದೊಡ್ಡುಳ್ಳಾರ್ತಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸಿ ಗೆದ್ದು, 2008 ರಿಂದ 10 ರವರೆಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Advertisement
Advertisement

ಮೃತರು ಪತಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಚಳ್ಳಕೆರೆ ತಾಲ್ಲೂಕು ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಗುರುವಾರ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಸಂತಾಪ : ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಯುವ ಮುಖಂಡ ರಘುಚಂದನ್, ಜಿ.ಎಸ್.ಅನಿತ್‍ಕುಮಾರ್ ಇನ್ನು ಅನೇಕರು ಲಲಿತಮ್ಮನವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Advertisement
Tags :
Advertisement