For the best experience, open
https://m.suddione.com
on your mobile browser.
Advertisement

ಬಾಕಿ ವೇತನ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಿ : ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒತ್ತಾಯ

04:58 PM Feb 22, 2024 IST | suddionenews
ಬಾಕಿ ವೇತನ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಿ   ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒತ್ತಾಯ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.22 : ಮೂವತ್ತೆಂಟು ತಿಂಗಳ ಬಾಕಿ ವೇತನ ಹಾಗೂ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಗುರುವಾರ ಉಪವಾಸ ಧರಣಿ ಹಮ್ಮಿಕೊಳ್ಳಲಾಗಿತ್ತು.

Advertisement
Advertisement

ದಿನಾಂಕ : 1-1-2020 ರಿಂದ28-2-2023 ರವರೆಗಿನ ಶೇ.15 ರ ವೇತನ ಹೆಚ್ಚಳದ ಬಾಕಿ ಹಣ ಸಾರಿಗೆ ನೌಕರರಿಗೆ ಬರಬೇಕಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ಸಾರಿಗೆ ನಿಗಮಗಳ ಆಡಳಿತಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸದ ಕಾರಣ ಉಪವಾಸ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
1-1-2024 ರಿಂದ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಹೊಸ ವೇತನ ಪರಿಷ್ಕರಣೆಯಾಗಬೇಕು.

ಕೇಂದ್ರ ಸರ್ಕಾರ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಕ್ರೂರ ಶಿಕ್ಷೆ ವಿಧಿಸುವಂತ ಕಾನೂನು ತಿದ್ದುಪಡಿ ತಂದಿರುವುದರ ವಿರುದ್ದ ದೇಶಾದ್ಯಂತ ಚಾಲಕರ ಆಕ್ರೋಶ ಭುಗಿಲೆದ್ದಿದೆ. 1-1-2020 ರಿಂದ 28-2-2023 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ವೇತನ ಪರಿಷ್ಕರಣೆ ಅಳವಡಿಸಿ ಕೂಡಲೆ ನಿವೃತ್ತಿ ಸೌಲಭ್ಯಗಳ ಬಾಕಿ ಹಣ ನೀಡಬೇಕು. ಶಕ್ತಿ ಯೋಜನೆಯ ಸಂಪೂರ್ಣ ಅನುದಾನ ಕೂಡಲೆ ಪಾವತಿಯಾಗಬೇಕು. 1-1-2024 ರಿಂದ ಹೊಸ ವೇತನ ಜಾರಿಯಾಗಬೇಕು. 1-1-2020 ರಿಂದ ನಿವೃತ್ತಿಯಾದ ಮತ್ತು ಹೊರ ಹೋಗಿರುವ ನೌಕರರಿಗೆ ಹೊಸ ವೇತನ ಶ್ರೇಣಿ ಕೂಡಲೆ ಜಾರಿಯಾಗಬೇಕೆಂದು ಧರಣಿ ನಿರತರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಕಾಂತರಾಜ್, ಗೌರವಾಧ್ಯಕ್ಷ ರಹೀಂಸಾಬ್, ಪ್ರಧಾನ ಕಾರ್ಯದರ್ಶಿ ಟಿ.ಅಶೋಕ ಸೇರಿದಂತೆ ಪದಾಧಿಕಾರಿಗಳು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

Advertisement
Tags :
Advertisement