For the best experience, open
https://m.suddione.com
on your mobile browser.
Advertisement

ಹಿರಿಯೂರು | ಟೈರ್ ಬ್ಲಾಸ್ಟ್, ಕಾರು ಪಲ್ಟಿ, ಐವರಿಗೆ ಗಾಯ

06:10 PM Mar 03, 2024 IST | suddionenews
ಹಿರಿಯೂರು   ಟೈರ್ ಬ್ಲಾಸ್ಟ್  ಕಾರು ಪಲ್ಟಿ  ಐವರಿಗೆ ಗಾಯ
Advertisement

ಸುದ್ದಿಒನ್, ಹಿರಿಯೂರು, ಮಾರ್ಚ್.03 : ಹಿರಿಯೂರು - ಚಳ್ಳಕೆರೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹಿರಿಯೂರು ತಾಲೂಕಿನ ಕಳವಿಬಾಗಿ ಗೇಟ್ ಬಳಿ ನಡೆದಿದೆ.

Advertisement
Advertisement

ಕಾರು ಪಲ್ಟಿ ರಭಸಕ್ಕೆ ಕಾರಿನ ಮುಂಭಾಗದಲ್ಲಿ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಐವರು
ಚಳ್ಳಕೆರೆಯಿಂದ ಶಿರಾ ನಗರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement

Advertisement
Tags :
Advertisement