For the best experience, open
https://m.suddione.com
on your mobile browser.
Advertisement

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್ : ಕಾಂಗ್ರೆಸ್ ವ್ಯಂಗ್ಯ

02:47 PM Sep 01, 2023 IST | suddionenews
ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್   ಕಾಂಗ್ರೆಸ್ ವ್ಯಂಗ್ಯ
Advertisement

Advertisement

ಬೆಂಗಳೂರು: ಬಿ ಎಲ್ ಸಂತೋಷ್ ಇತ್ತಿಚೆಗೆ ಕಾಂಗ್ರೆಸ್ ಶಾಸಕರ ಬಗ್ಗೆ ಒಂದು ಮಾತು ಹೇಳಿದ್ರು. ಕಾಂಗ್ರೆಸ್ ನ 40-50 ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಓಕೆ ಎಂದರೆ ಒಂದು ದಿನದ ಕೆಲಸ ಅಷ್ಟೇ ಎಂದಿದ್ದರು. ಇದೀಗ ಆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.

Advertisement

Advertisement

"ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು.

Advertisement
Advertisement

@blsanthosh ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್!

ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕರು ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಎಂಬುದನ್ನು ಮೊದಲು ತಿಳಿದುಕೊಳ್ಳಲಿ. ಕಾಂಗ್ರೆಸ್ ನಿಂದ ಅಂತು ಯಾರೂ ಎಲ್ಲಿಯೂ ಹೋಗಲ್ಲ ಎಂದಿದ್ದಾರೆ.

Tags :
Advertisement