For the best experience, open
https://m.suddione.com
on your mobile browser.
Advertisement

ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಅಧಿಕಾರ ಸ್ವೀಕಾರ

03:00 PM Jul 04, 2023 IST | suddionenews
ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಅಧಿಕಾರ ಸ್ವೀಕಾರ
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್,ಚಿತ್ರದುರ್ಗ, (ಜು.04) : ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಎಂ ಅವರು ಅಧಿಕಾರ ಸ್ವೀಕರಿಸಿದರು.

Advertisement

ಹೈಕೋರ್ಟ್ ವಿಭಾಗೀಯ ಪೀಠದ ನಿರ್ದೇಶನದ ಮೇರೆಗೆ ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿ ಅಧಿಕಾರ ಅಧಿಕಾರ ಸ್ವೀಕರಿಸಿದರು.

ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಠದ ಆಡಳಿತ ನಿರ್ವಹಣೆಯ ಉದ್ದೇಶದಿಂದ ಮಾಜಿ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿದ ಹೈಕೋರ್ಟ್, ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಲು ಮಠದ ಭಕ್ತರಿಗೆ ಆರು ವಾರಗಳ ಕಾಲಾವಕಾಶ ನೀಡಿತ್ತು.

ಆಡಳಿತಾಧಿಕಾರಿ ನೇಮಕಾತಿ ರದ್ದುಪಡಿಸಿದ ಆದೇಶ ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ, ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

Tags :
Advertisement