ಸಂಸದ ಸ್ಥಾನದಿಂದ ಅನರ್ಹಗೊಂಡ ಪ್ರಜ್ವಲ್ ರೇವಣ್ಣ : 2024 ಸ್ಪರ್ಧೆ ಮಾಡುವಂತಿಲ್ಲ..!
02:58 PM Sep 01, 2023 IST | suddionenews
Advertisement
Advertisement
ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಆಗಿದೆ. ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಲಾಗಿದೆ. ಹೈಕೋರ್ಟ್ ನಿಂದ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಅನರ್ಹಗೊಳಿಸಲಾಗಿದೆ.
ಕಳೆದ ಬಾರಿ ನಡೆದಿದ್ದಂತ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ಆಸ್ತಿ ವಿಚಾರವಾಗಿ ತಪ್ಪು ಮಾಹಿತಿಯನ್ನು ನೀಡಿದ್ದರು ಎಂದು ಎ ಮಂಜು, ದೇವರಾಜೇಗೌಡ ಅವರು ಅರ್ಜಿ ಸಲ್ಲಿಸಿದ್ದರು. ಇಂದು ಅವರು ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಿಂದ ಈ ತೀರ್ಪು ಹೊರ ಬಂದಿದೆ.
Advertisement
ಲೋಕಸಭಾ ಚುನಾವಣೆ ಹತ್ತಿರ ಇರುವಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ಶಾಕ್ ಆಗಿದೆ. ಹೈಕೋರ್ಟ್ ನೀಡಿರುವ ಆದೇಶದ ಪ್ರಕಾರ ಆರು ವರ್ಷ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.