For the best experience, open
https://m.suddione.com
on your mobile browser.
Advertisement

ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ : ಫ್ರಿಡ್ಜ್ ಖರೀದಿಸಿದ ಮಹಿಳೆ ಬಗ್ಗೆ ಡಿಕೆಶಿ ಸಂತಸ

12:16 PM Apr 10, 2024 IST | suddionenews
ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ   ಫ್ರಿಡ್ಜ್ ಖರೀದಿಸಿದ ಮಹಿಳೆ ಬಗ್ಗೆ ಡಿಕೆಶಿ ಸಂತಸ
Advertisement

Advertisement
Advertisement

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗಾಗಿ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುತ್ತಿದೆ. ಆ ಎರಡು ಸಾವಿರ ರೂಪಾಯಿ ಎಷ್ಟೋ ಜನ ಮಹಿಳೆಯರಿಗೆ ಸಾಕಷ್ಟು ಅನುಕೂಲ ಮಾಡಿದೆ. ಹಾವೇರಿಯಲ್ಲಿ ಮಹಿಳೆಯೊಬ್ಬರು ಆ ಹಣ ಕೂಡಿಟ್ಟುಕೊಂಡು ಫ್ರಿಡ್ಜ್ ಖರೀದಿ ಮಾಡಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಡಿಕೆ ಶಿವಕುಮಾರ್ ಅವರ ಗಮನಕ್ಕೂ ಬಂದಿದ್ದು, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Advertisement

Advertisement
Advertisement

ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದಿದ್ದಾರೆ.

2023ರ ಜುಲೈನಲ್ಲಿ ಗೃಹಲಕ್ಷ್ಮೀ ಯೋಜನೆ ಪ್ರಾರಂಭವಾಗಿತ್ತು. ಅಂದಿನಿಂದ ಬಂದಂತ ಹಣವನ್ನು ಕೂಡಿಟ್ಟುಕೊಂಡು ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ಲತಾ ಎಂಬ ಗೃಹಿಣಿ ಫ್ರಿಡ್ಜ್ ತೆಗೆದುಕೊಂಡಿದ್ದಾರೆ. ಅದುವೇ 17,500 ರೂಪಾಯಿ ಆಗಿದೆ. ಹಬ್ಬದ ದಿನ ಈ ಫ್ರಿಡ್ಜ್ ಗೆ ಮನೆಯವರೆಲ್ಲಾ ಸೇರಿ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮಾತು ಕೊಟ್ಟಂತೆ ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿತ್ತು. ಅದರಲ್ಲಿ ಗೃಹಲಕ್ಷ್ಮೀಯೂ ಒಂದು.

Advertisement
Tags :
Advertisement